ಬೆಂಗಳೂರು: ನಟಿ ಅನುಪ್ರಭಾಕರ್ ಅವರಿಗೆ ಕೋವಿಡ್–19 ದೃಢಪಟ್ಟಿದ್ದು, ಈ ಕುರಿತು ಅವರು ಇನ್ಸ್ಟಾಗ್ರಾಂ ಮುಖಾಂತರ ಅವರು ಮಾಹಿತಿ ನೀಡಿದ್ದಾರೆ.

‘ಎಲ್ಲ ರೀತಿಯ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ, ದುರದೃಷ್ಟವಶಾತ್ ನನಗೆ ಕೋವಿಡ್–19 ದೃಢಪಟ್ಟಿದೆ. ನನ್ನ ವೈದ್ಯರು ಸೂಚಿಸಿರುವಂತೆ ಎಲ್ಲ ಔಷಧಿಗಳನ್ನು ನಾನು ತೆಗೆದುಕೊಳ್ಳುತ್ತಿದ್ದು, ಮನೆಯಲ್ಲೇ ಪ್ರತ್ಯೇಕವಾಸದಲ್ಲಿದ್ದೇನೆ. ಕುಟುಂಬದ ಇತರೆ ಸದಸ್ಯರಿಗೆ ಕೋವಿಡ್ ನೆಗೆಟಿವ್ ಬಂದಿದೆ. ನನ್ನ ಜೊತೆ ಸಂಪರ್ಕದಲ್ಲಿ ಇದ್ದವರು ತಕ್ಷಣವೇ ಕೋವಿಡ್ ಪರೀಕ್ಷೆಗೆ ಒಳಪಡಿ. ಎರಡನೇ ಅಲೆಯನ್ನು ನಿರ್ಲಕ್ಷಿಸಬೇಡಿ. ಮನೆಯಲ್ಲೇ ಇರಿ ಸುರಕ್ಷಿತವಾಗಿರಿ’ ಎಂದು ಅನು ಪ್ರಭಾಕರ್ ಅವರು ಇನ್ಸ್ಟಾಗ್ರಾಂನಲ್ಲಿ ಉಲ್ಲೇಖಿಸಿದ್ದಾರೆ.

‘ಕೋವಿಡ್–19 ಎರಡನೇ ಅಲೆ ಪ್ರಾರಂಭವಾಗಿದ್ದು, ದಯವಿಟ್ಟು ಮಾಸ್ಕ್ ಧರಿಸಿ, 45 ವರ್ಷ ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆ ಪಡೆದುಕೊಳ್ಳಿ’ ಎಂದು ವಾರದ ಹಿಂದೆಯಷ್ಟೇ ಅವರು ವಿಡಿಯೊ ಮೂಲಕ ಸಂದೇಶ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.