ಎರಡೂ ಕೈಗಳಿಲ್ಲದಿದ್ದರೂ ಬದುಕಿನಲ್ಲಿ ಸಾಕಷ್ಟು ಸಾಧನೆ ಮಾಡಿ, ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸಿರುವ ವಿಶ್ವಾಸ್ ಅವರ ಬದುಕಿನ ನೈಜ ಕಥೆಯನ್ನು ಹೊಂದಿರುವ ‘ಅರಬ್ಬೀ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಡ್ಯಾನ್ಸ್, ರಿಯಾಲಿಟಿ ಶೋ, ಈಜಿನ ಮೂಲಕ ಗುರುತಿಸಿಕೊಂಡಿರುವ ವಿಶ್ವಾಸ ಅವರೇ ಈ ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದು, ರಾಜ್‌ಕುಮಾರ್ ಚಿತ್ರವನ್ನು ನಿರ್ದೇಶಿಸಿದ್ದಾರೆ. ಶ್ರೀ ವಿಜಯ ರಾಘವೇಂದ್ರ ಪ್ರೊಡಕ್ಷನ್ಸ್ ಮೂಲಕ ಚೇತನ್ ಸಿ.ಎಸ್ ಬಂಡವಾಳ ಹೂಡಿದ್ದಾರೆ.

‘ಚಿಕ್ಕ ವಯಸ್ಸಿನಲ್ಲಿ ತಂದೆ-ತಾಯಿ ಜೊತೆಗೆ ತನ್ನ ಎರಡೂ ಕೈಗಳನ್ನು ಕಳೆದುಕೊಂಡ ವಿಶ್ವಾಸ್, ತನ್ನ ಅಂಗವಿಕಲತೆಯ ಕಾರಣದಿಂದಲೇ ಸಮಾಜದಲ್ಲಿ ಸಾಕಷ್ಟು ಅವಮಾನ ಅನುಭವಿಸುತ್ತಾನೆ. ನಂತರ ತನ್ನನ್ನು ಅವಮಾನಿಸಿದವರೆದುರೇ ಸಾಧನೆಮಾಡಿ ತೋರಿಸಬೇಕೆಂದು ನಿರ್ಧರಿಸಿ, ಹಠ, ಆತ್ಮವಿಶ್ವಾಸದಿಂದಲೇ ಗೆಲುವು ಸಾಧಿಸುತ್ತಾನೆ ಎಂಬುದೇ ಚಿತ್ರದ ಕಥೆ’ ಎಂದರು ನಿರ್ದೇಶಕರು.

ಸ್ವಿಮ್ಮಿಂಗ್ ಕೋಚ್ ಆಗಿ ನಾಯಕನಿಗೆ ಸ್ಪೂರ್ತಿ ತುಂಬುವ ಪಾತ್ರದಲ್ಲಿ ಅಣ್ಣಾಮಲೈ ಕಾಣಿಸಿಕೊಂಡಿದ್ದಾರೆ. ‘ಸರಿಗಮಪ’ ಖ್ಯಾತಿಯ ಕಂಬದ ರಂಗಯ್ಯ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದು, ಆನಂದ್ ದಿಂಡವಾರ ಛಾಯಾಚಿತ್ರಗ್ರಹಣವಿದೆ. ಚಿತ್ರ ಬಿಡುಗಡೆಗೆ ಸಿದ್ಧವಿದ್ದು, ಶೀಘ್ರದಲ್ಲಿ ತೆರೆಗೆ ತರಲು ತಂಡ ಆಲೋಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.