ಅಭಿಷೇಕ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳಿರುವ ‘ಆರಾಮ್ ಅರವಿಂದ ಸ್ವಾಮಿ’ ಸಿನಿಮಾ ನವೆಂಬರ್ 22ರಂದು ತೆರೆಕಾಣಲಿದೆ. ಚಿತ್ರತಂಡವು ಮೊದಲ ಮೂರು ದಿನಗಳಿಗೆ ಸಿನಿಮಾ ಟಿಕೆಟ್ ದರವನ್ನು ₹99 ನಿಗದಿಪಡಿಸಿದೆ.

ಪ್ರೇಕ್ಷಕರನ್ನು ತಲುಪಲು ಮತ್ತೊಂದು ಪ್ರಯೋಗಕ್ಕೆ ಕೈಹಾಕಿರುವ ಚಿತ್ರತಂಡ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್, ನಿರ್ಮಾಪಕ–ವಿತರಕರಾದ ಜಯಣ್ಣ, ಕಾರ್ತಿಕ್ ಗೌಡ, ಯೋಗಿ ಜಿ. ರಾಜ್, ನಿರ್ದೇಶಕ ತರುಣ್ ಸುಧೀರ್, ನಟ ಯುವರಾಜ್ಕುಮಾರ್ಗೆ ₹99ರ ಟಿಕೆಟ್ಗಳನ್ನು ನೀಡಿದೆ.

ಸಿನಿಮಾದಲ್ಲಿ ಅನೀಶ್ ತೇಜೇಶ್ವರ್ ನಾಯಕನಾಗಿ ನಟಿಸಿದ್ದಾರೆ. ಮಿಲನ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ಅನೀಶ್ಗೆ ಜೋಡಿಯಾಗಿದ್ದಾರೆ. ಮಾಸ್ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಅನೀಶ್, ಈ ಸಿನಿಮಾ ಮೂಲಕ ರೊಮ್ಯಾಂಟಿಕ್ ಹೀರೊ ಆಗಿ ಪ್ರೇಕ್ಷಕರ ಎದುರಿಗೆ ಬರಲಿದ್ದಾರೆ. ಕೇರಳದ ಹುಡುಗಿಯಾಗಿ ಇಲ್ಲಿ ಮಿಲನಾ ಕಾಣಿಸಿಕೊಂಡಿದ್ದಾರೆ. ‘ನಮ್ ಗಣಿ ಬಿಕಾಂ ಪಾಸ್’, ‘ಗಜಾನನ ಆ್ಯಂಡ್ ಗ್ಯಾಂಗ್’ ಬಳಿಕ ಅಭಿಷೇಕ್ ಶೆಟ್ಟಿ ನಿರ್ದೇಶಿಸುತ್ತಿರುವ ಮೂರನೇ ಚಿತ್ರ ಇದಾಗಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ, ವೈವಿಬಿ ಶಿವಸಾಗರ್ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ. ಶ್ರೀಕಾಂತ್ ಪ್ರಸನ್ನ ಹಾಗೂ ಪ್ರಶಾಂತ್ ರೆಡ್ಡಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.