ಬೆಂಗಳೂರು: ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಅಣ್ಣ ಕಿರಣ್(44), ಕೋವಿಡ್–19ನಿಂದ ಮೃತಪಟ್ಟಿದ್ದಾರೆ.

ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿರುವ ಅರ್ಜುನ್ ಜನ್ಯ, ‘ಅಣ್ಣ ಕೋವಿಡ್ನಿಂದ ಮೃತಪಟ್ಟಿದ್ದಾನೆ. ನೀನಿಲ್ಲದೆ ಇರುವ ನೋವನ್ನು ಹೇಗೆ ವ್ಯಕ್ತಪಡಿಸಬೇಕು ಎನ್ನುವುದು ತಿಳಿಯುತ್ತಿಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ನೀನು ನನ್ನ ಉಸಿರಲ್ಲಿರುವೆ’ ಎಂದು ಬರೆದಿದ್ದಾರೆ. ಅನಾರೋಗ್ಯದ ಕಾರಣ 15 ದಿನಗಳ ಹಿಂದೆ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ಕಿರಣ್ ಅವರು, ಭಾನುವಾರ ರಾತ್ರಿ ಮೃತಪಟ್ಟಿದ್ದರು.

ಕಳೆದ ತಿಂಗಳು ಅರ್ಜುನ್ ಜನ್ಯ ಅವರಿಗೆ ಕೋವಿಡ್ ದೃಢಪಟ್ಟಿತ್ತು. ಏ. 4ರಂದು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಅವರು ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಏ. 10ರಂದು ಅವರು ಗುಣಮುಖರಾಗಿ ಮನೆಗೆ ತೆರಳಿ ಕ್ವಾರಂಟೈನ್ನಲ್ಲಿ ಇದ್ದರು. ಅರ್ಜುನ್ ಜನ್ಯ ಆಸ್ಪತ್ರೆಯಲ್ಲಿ ಇರುವ ಸಂದರ್ಭದಲ್ಲಿ ಅವರ ಆರೋಗ್ಯ ಸ್ಥಿತಿಯ ಕುರಿತು ಸಾಕಷ್ಟು ವದಂತಿಗಳು ಹರಡಿದ್ದವು. ಇದರಿಂದ ಬೇಸತ್ತಿದ್ದ ಅರ್ಜುನ್ ಜನ್ಯ, ಸೈಬರ್ ಪೊಲೀಸರಿಗೆ ದೂರು ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.