ರಕ್ಷಿತ್ ಶೆಟ್ಟಿ ನಟನೆಯ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದ ಸಚಿನ್ ರವಿ ಪ್ಯಾನ್ ಇಂಡಿಯಾ ಸಿನಿಮಾವೊಂದಕ್ಕೆ ಸಜ್ಜಾಗುತ್ತಿದ್ದಾರೆ.

ಬಾಲಿವುಡ್ ಸ್ಟಾರ್ ಶಾಹಿದ್ ಕಪೂರ್ ನಟಿಸುತ್ತಿರುವ ‘ಅಶ್ವತ್ಥಾಮ–ದಿ ಸಾಗ ಕಂಟಿನ್ಯೂಸ್’ ಸಿನಿಮಾವನ್ನು ಸಚಿನ್ ರವಿ ನಿರ್ದೇಶಿಸುತ್ತಿದ್ದಾರೆ. ಹಲವು ವರ್ಷಗಳಿಂದ ರಕ್ಷಿತ್ ಶೆಟ್ಟಿ ತಂಡದಲ್ಲಿ ಸಚಿನ್ ಗುರುತಿಸಿಕೊಂಡಿದ್ದಾರೆ. ಸಂಕಲನಕಾರರಾಗಿ, ಗ್ರಾಫಿಕ್ಸ್ ಪರಿಣಿತರಾಗಿ ಕೆಲಸ ನಿಭಾಯಿಸಿದ್ದಾರೆ. ಅವರೀಗ ಬಾಲಿವುಡ್ ಕಡೆ ಮುಖ ಮಾಡಿದ್ದಾರೆ. ಈ ಸಿನಿಮಾದಲ್ಲಿ ಶಿವರಾಜ್ಕುಮಾರ್ ಮುಖ್ಯಭೂಮಿಕೆಯಲ್ಲಿ ನಟಿಸಲಿದ್ದಾರೆ ಎಂದು 2022ರ ಜುಲೈನಲ್ಲಿ ಸಚಿನ್ ರವಿ ತಿಳಿಸಿದ್ದರು. ಇದೀಗ ಶಾಹಿದ್ ಕಪೂರ್ ‘ಅಶ್ವತ್ಥಾಮ’ನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ.

‘ಈ ಕಥೆಯಲ್ಲಿ ಅಶ್ವತ್ಥಾಮ ವರ್ತಮಾನದಲ್ಲಿರುವ ನಾಯಕ. ಅಮರತ್ವದ ಪರಿಕಲ್ಪನೆಯನ್ನು ಶೋಧಿಸುವ ಕೆಲಸ ಆತನದ್ದು. ಇಷ್ಟನ್ನಷ್ಟೇ ಹೇಳಬಲ್ಲೆ. ಆದರೆ ಈ ಚಿತ್ರ ಅದ್ಭುತ ಆ್ಯಕ್ಷನ್ ಇರುವ ಮತ್ತು ಎಲ್ಲಾ ತಲೆಮಾರಿನ ವೀಕ್ಷಕರನ್ನೂ ಸೆಳೆಯಬಲ್ಲ ಚಿತ್ರವಾಗಲಿದೆ. ಅಶ್ವತ್ಥಾಮನಂತೆ ಅಮರತ್ವ ಹೊಂದಿರುವ ವ್ಯಕ್ತಿಗಳನ್ನು ಚಿತ್ರದಲ್ಲಿ ತರುವ ಪ್ರಯತ್ನವೂ ಇರಲಿದೆ. ಕಾಲ್ಪನಿಕ ಸನ್ನಿವೇಶನಗಳ ಅನ್ವೇಷಣೆ ಹಾಗೂ ಅದರ ಸಾಧ್ಯತೆ ಕುರಿತು ಕಥೆ ರಚಿಸಿ, ಸಾಧ್ಯವಾಗಿಸುವುದು ಚಿತ್ರ ನಿರ್ದೇಶನಕಾಗಿ ಸವಾಲಿನ ಕೆಲಸ. ನನ್ನ ಬಾಲ್ಯದಿಂದಲೂ ಅಶ್ವತ್ಥಾಮನ ಪಾತ್ರ ನನ್ನ ಮೇಲೆ ಬಹಳಷ್ಟು ಪ್ರಭಾವ ಬೀರಿದೆ. ಈ ಪಾತ್ರದ ಬಗ್ಗೆಯೇ ಚಿತ್ರ ಮಾಡುವ ಯೋಜನೆ ಹೊಂದಿದ್ದೆ. ಕಡೆಗೂ ನನ್ನ ಕಲ್ಪನೆಯ ಚಿತ್ರ ಸೆಟ್ಟೇರುತ್ತಿದೆ ಎಂಬ ಸಂಭ್ರಮದಲ್ಲಿದ್ದೇನೆ’ ಎನ್ನುತ್ತಾರೆ ಸಚಿನ್.

‘ಅಶ್ವತ್ಥಾಮ’ ಚಿತ್ರವನ್ನು ಪೂಜಾ ಎಂಟರ್ಟೈನ್ಮೆಂಟ್ ಕಂಪನಿಯಡಿ ವಿಷ್ಣು ಭಗ್ನಾನಿ, ಜಾಕಿ ಭಗ್ನಾನಿ ಹಾಗೂ ದೀಪ್ತಿಕಾ ದೇಶಮುಖ್ ನಿರ್ಮಾಣ ಮಾಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.