ಬೆಂಗಳೂರು: ಚಂದನವನದ ರೋರಿಂಗ್ ಸ್ಟಾರ್ ಶ್ರೀಮುರುಳಿ ನಟನೆಯ ‘ಬಘೀರ’ ಚಿತ್ರ ನೆಟ್ಫ್ಲಿಕ್ಸ್ ಒಟಿಟಿಯಲ್ಲಿ ಬಿಡುಗಡೆಯಾಗಿದೆ.

ಅ.31ರಂದು ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಇಂದು (ನ. 21ರಂದು) ಚಿತ್ರ ಒಟಿಟಿಯಲ್ಲಿ ತೆರೆ ಕಂಡಿದೆ.

ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಿದೆ. ನೆಟ್ಫ್ಲಿಕ್ಸ್ನಲ್ಲಿ ಹಲವು ದಿನಗಳ ಬಳಿಕ ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾವೊಂದು ಬಿಡುಗಡೆಯಾಗಿದೆ.

ಶ್ರೀಮುರುಳಿ, ರುಕ್ಮಿಣಿ ವಸಂತ್, ರಂಗಾಯಣ ರಘು, ಸುಧಾರಾಣಿ, ಅಚ್ಯುತ್ ಕುಮಾರ್, ಪ್ರಕಾಶ್ ರಾಜ್ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಕನ್ನಡದಲ್ಲಿ ಇತ್ತೀಚೆಗೆ ತೆರೆಕಂಡ ಸಿನಿಮಾಗಳಲ್ಲಿ ಮಾರ್ಟಿನ್ ಮತ್ತು ಭೀಮಾ ಬಳಿಕ ಅತಿ ಹೆಚ್ಚು ಗಳಿಕೆ ಕಂಡ ಚಿತ್ರ ಬಘೀರ ಎನ್ನಲಾಗಿದೆ.

ವಿಜಯ್ ಕಿರಗಂದೂರು ನಿರ್ಮಾಣ, ಸೂರಿ ನಿರ್ದೇಶನದ ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.

ಡಿ.5ಕ್ಕೆ ಅಮರನ್ ಬಿಡುಗಡೆ

ಶಿವಕಾರ್ತಿಕೇಯನ್, ಸಾಯಿಪಲ್ಲವಿ ನಟಿಸಿದ ‘ಅಮರನ್’ ಚಿತ್ರ ಡಿ.5ಕ್ಕೆ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ಭಾರತೀಯ ಸೇನೆಯಲ್ಲಿದ್ದ ಮೇಜರ್ ಮುಕುಂದ್ ವರದರಾಜನ್ ಅವರ ಜೀವನಾಧಾರಿತ ಕಥಾಹಂದರ ಹೊಂದಿರುವ ಅಮರನ್ ಚಿತ್ರ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಈ ಚಿತ್ರವೂ ಅ.31ರಂದು ಚಿತ್ರಮಂದಿರಗಳಲ್ಲಿ ತೆರೆಕಂಡಿತ್ತು. ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಚಿತ್ರ ಬಿಡುಗಡೆಯಾಗಿದೆ.
.‘ಬಘೀರ’ ಚಿತ್ರ ವಿಮರ್ಶೆ: ಹಳೆ ಕಥೆಗೆ ಹೊಸ ಆ್ಯಕ್ಷನ್ .PHOTOS | ಬಘೀರ ಚಿತ್ರದ ನಾಯಕಿ ರುಕ್ಮಿಣಿ ವಸಂತ್ ಚೆಂದದ ಫೋಟೊಸ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.