ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಅಮೃತಮತಿ’ ಚಿತ್ರವು ಲಾಸ್ ಏಂಜಲಿಸ್ ಸನ್ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಪಡೆದಿದೆ.

ಜೊತೆಗೆ ಚಿತ್ರಕಥೆ(ಸ್ಕ್ರಿಪ್ಟ್) ರಚನೆಗಾಗಿ ನಿರ್ದೇಶಕ ಬರಗೂರು ರಾಮಚಂದ್ರಪ್ಪ ವೈಯಕ್ತಿಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಕವಿ ಜನ್ನನಿಂದ ರಚಿತವಾದ ‘ಯಶೋಧರ ಚರಿತೆ’ ಕಾವ್ಯವನ್ನು ಆಧರಿಸಿ ರಚಿಸಿದ ಈ ಚಿತ್ರಕ್ಕೆ ವಿದೇಶಿ ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅಪಾರ ಮನ್ನಣೆ ಸಿಗುತ್ತಿದೆ. ಇಲ್ಲಿಯವರೆಗೆ ಹತ್ತು ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗೆ ಈ ಚಿತ್ರವು ಆಯ್ಕೆಯಾಗಿದೆ. ಎರಡು ಚಿತ್ರೋತ್ಸವಗಳಲ್ಲಿ ನಟಿ ಹರಿಪ್ರಿಯಾ ಅವರಿಗೆ ಶ್ರೇಷ್ಠ ನಟಿ ಪ್ರಶಸ್ತಿ ಬಂದಿದೆ. ಅಮೇರಿಕದ ಅಟ್ಲಾಂಟ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶ್ರೇಷ್ಠ ವಿದೇಶಿ ಭಾಷಾ ಚಿತ್ರ ಪ್ರಶಸ್ತಿಯನ್ನು ಈ ಚಿತ್ರವು ಪಡೆದಿತ್ತು.

‘ನಾನು ನಿರ್ದೇಶಿಸಿದ ಕೆಲವು ಚಿತ್ರಗಳು ಉತ್ತಮ ಚಿತ್ರ ಪ್ರಶಸ್ತಿ ಪಡೆದಿವೆ. ನಿರ್ದೇಶನಕ್ಕಾಗಿ ನೀಡುವ ರಾಜ್ಯದ ಉನ್ನತ ಮನ್ನಣೆಯಾದ ‘ಪುಟ್ಟಣ್ಣ ಕಣಗಾಲ್’ಪ್ರಶಸ್ತಿಯೂ ನನಗೆ ಲಭಿಸಿದೆ. ನಾನು ರಚಿಸಿದ ಕತೆ, ಗೀತೆ, ಸಂಭಾಷಣೆಗಳಿಗೂ ಪ್ರಶಸ್ತಿಗಳು ಲಭಿಸಿವೆ. ಆದರೆ, ಇಲ್ಲಿಯವರೆಗೆ ನಾನು ರಚಿಸಿದ ಚಿತ್ರಕಥೆಗೆ ಪ್ರಶಸ್ತಿ ಬಂದಿರಲಿಲ್ಲ. ಮೊತ್ತಮೊದಲ ಬಾರಿಗೆ ಚಿತ್ರಕಥೆಗಾಗಿ ನನಗೆ ಪ್ರಶಸ್ತಿ ಬಂದಿರುವುದು ಸಂತೋಷವಾಗಿದೆ. ಇದನ್ನು ಚಿತ್ರತಂಡಕ್ಕೆ ಅರ್ಪಿಸುತ್ತೇನೆ. ಈ ಮೂಲಕ ಇಡೀ ಚಿತ್ರತಂಡದ ಸಹಕಾರವನ್ನು ಗೌರವಿಸುತ್ತೇನೆ’ ಎಂದು ಬರಗೂರು ತಿಳಿಸಿದ್ದಾರೆ.

ಚಿತ್ರವು ಇಂಚರ ಪುಟ್ಟಣ್ಣ ಪ್ರೊಡಕ್ಷನ್ ಸಂಸ್ಥೆಯ ಪುಟ್ಟಣನವರಿಂದ ನಿರ್ಮಾಣಗೊಂಡಿದ್ದು, ಮುಂಬೈನ ಸಂಸ್ಥೆಯೊಂದು ಪ್ರದರ್ಶನದ ಹಕ್ಕುಗಳನ್ನು ಪಡೆದಿದ್ದು, ಕೋವಿಡ್ ಕಡಿಮೆಯಾದ ಮೇಲೆ ಚಿತ್ರವು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ ಎಂದು ಬರಗೂರು ತಿಳಿಸಿದ್ದಾರೆ. ಚಿತ್ರದಲ್ಲಿ ಯಶೋಧರನ ಪಾತ್ರದಲ್ಲಿ ನಟ ಕಿಶೋರ್ ನಟಿಸಿದ್ದಾರೆ. ಹಿರಿಯ ನಟ ಸುಂದರ್ ರಾಜ್, ಪ್ರಮೀಳಾ ಜೋಷಾಯ್, ತಿಲಕ್, ಸುಪ್ರಿಯಾ ರಾವ್, ವತ್ಸಲಾ ಮೋಹನ್, ಅಂಬರೀಷ್ ಸಾರಂಗಿ, ಭೂಮಿಕಾ ಲಕ್ಷ್ಮಿನಾರಾಯಣ ತಾರಾಗಣವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.