ಬೆಂಗಳೂರು: ನಟ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾಕ್ಕೆ ಕನ್ನಡ ಸೇರಿದಂತೆ ತೆಲುಗು, ತಮಿಳು, ಹಿಂದಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಾಂತಾರ ಸಿನಿಮಾ ನೂರಾರು ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಪರ ಭಾಷಾ ನಟ –ನಟಿಯರು ಸೇರಿದಂತೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ.

ಇದೀಗ ಬಾಲಿವುಡ್ ನಟಿ ಕಂಗನಾ ರನೌತ್ ಅವರು ‘ಕಾಂತಾರ’ ಚಿತ್ರದ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.

‘ನಾನು ಕುಟುಂಬದವರ ಜತೆ ಕಾಂತಾರ ನೋಡಿ ಬಂದಿದ್ದೇನೆ. ಈಗಲೂ ನಾನು ಶೇಕ್ ಆಗುತ್ತಿದ್ದೇನೆ. ಎಂತಹ ಸ್ಫೋಟಕ ಅನುಭವ. ರಿಷಬ್ ಶೆಟ್ಟಿ ಅವರೇ ನಿಮಗೆ ಹ್ಯಾಟ್ಸ್ ಆಫ್. ಬರವಣಿಗೆ, ನಿರ್ದೇಶನ, ನಟನೆ, ಆ್ಯಕ್ಷನ್ ಎಲ್ಲವೂ ಬ್ರಿಲಿಯಂಟ್. ನಂಬೋಕೆ ಸಾಧ್ಯವಾಗುತ್ತಿಲ್ಲ’ ಎಂದು ಕಂಗನಾ ವಿಡಿಯೊದಲ್ಲಿ ವಿವರಿಸಿದ್ದಾರೆ.

‘ಸಂಪ್ರದಾಯ, ಜಾನಪದ ವಿಚಾರ, ಸ್ಥಳೀಯ ಸಮಸ್ಯೆಗಳನ್ನು ಸಿನಿಮಾದಲ್ಲಿ ಹದವಾಗಿ ಬೆರೆಸಲಾಗಿದೆ. ಎಂಥ ಸುಂದರ ಛಾಯಾಗ್ರಹಣ, ಸಿನಿಮಾ ಎಂದರೆ ಇದು. ಒಂದು ವಾರಗಳ ಕಾಲ ಈ ಹ್ಯಾಂಗೋವರ್‌ನಿಂದ ಹೊರಬರಲು ಸಾಧ್ಯವಿಲ್ಲ’ ಎಂದು ಕಂಗನಾ ಹೇಳಿಕೊಂಡಿದ್ದಾರೆ.

‘ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಹೊಂಬಾಳೆ ಫಿಲಂಸ್ ಚಿತ್ರವನ್ನು ನಿರ್ಮಿಸಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.

‘ಕಾಂತಾರ’ ಸಿನಿಮಾ ಈವರೆಗೆ ₹170 ಕೋಟಿ ಗಳಿಕೆ ಕಂಡಿದೆ ಎಂದು ವರದಿ ಆಗಿದೆ. ಈ ಮೂಲಕ ಕನ್ನಡದ ಹಲವು ಸಿನಿಮಾಗಳು ಮಾಡಿದ್ದ ದಾಖಲೆಗಳನ್ನು ಈ ಚಿತ್ರ ಮುರಿದಿದೆ. ಈ ಮೂಲಕ ಈ ವರ್ಷ ತೆರೆಗೆ ಬಂದ ಕನ್ನಡದ ಚಿತ್ರಗಳ ಪೈಕಿ ಅತಿ ಹೆಚ್ಚು ಗಳಿಕೆ ಮಾಡಿದ ಎರಡನೇ ಚಿತ್ರ ಇದಾಗಿದೆ. ಮೊದಲ ಸ್ಥಾನದಲ್ಲಿ ‘ಕೆಜಿಎಫ್ 2’ ಇದೆ.

ಇವನ್ನೂ ಓದಿ...

*‘ಕಾಂತಾರ’ ನೋಡಿ ಅನುಷ್ಕಾ ಫಿದಾ: ರಿಷಬ್ ಶೆಟ್ಟಿಯನ್ನು ಕೊಂಡಾಡಿದ ಬಾಹುಬಲಿ ನಟಿ

*ಕಾಂತಾರದಿಂದ ದೊಡ್ಡ ಚಿತ್ರಗಳಿಗೆ ಹಾರ್ಟ್ ಅಟ್ಯಾಕ್: ರಿಷಬ್ ನಟನೆಗೆ ಆರ್ಜಿವಿ ಸಲಾಂ

*ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಬಾರದು: ನಟ ಚೇತನ್ಗೆ ಉಪೇಂದ್ರ ಟಾಂಗ್

*ಹಿಂದೂ, ಕ್ರಿಶ್ಚಿಯನ್, ಇಸ್ಲಾಂ ಆಮದು ಮಾಡಿಕೊಂಡ ಧರ್ಮಗಳು: ನಟ ಚೇತನ್ ಮತ್ತೆ ಕಿಡಿ

*ಭೂತ ಕೋಲ ಹಿಂದೂ ಸಂಸ್ಕೃತಿ: ರಿಷಬ್ ಶೆಟ್ಟಿ ಹೇಳಿಕೆ ಸುಳ್ಳೆಂದ ಚೇತನ್ 'ಅಹಿಂಸಾ'

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.