ಚಂದ್ರಮೋಹನ್ ನಿರ್ದೇಶನದ ಸತೀಶ್ ನೀನಾಸಂ ನಟನೆಯ ‘ಬ್ರಹ್ಮಚಾರಿ’ ಸಿನಿಮಾ ನವೆಂಬರ್ 29ರಂದು ಬಿಡುಗಡೆಯಾಗಲಿದೆ. ಚಿತ್ರಕ್ಕೆ ಪ್ರಾದೇಶಿಕ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು ಯು/ಎ ಪ್ರಮಾಣ ಪತ್ರ ನೀಡಿದೆ.

ಈ ಹಿಂದೆ ‘ಬಾಂಬೆ ಮಿಠಾಯಿ’ ಮತ್ತು ‘ಡಬಲ್ ಇಂಜನ್’ ಸಿನಿಮಾಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದ ಚಂದ್ರಮೋಹನ್, ‘ಬ್ರಹ್ಮಚಾರಿ’ ಸಿನಿಮಾದ ಚಿತ್ರಕಥೆ ಮತ್ತು ಸಂಭಾಷಣೆಯ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ.

ಕಾಮಿಡಿ ಹಾಗೂ ಕೌಟುಂಬಿಕ ಕಥಾಹಂದರ ಹೊಂದಿರುವ ಸಿನಿಮಾ ಇದಾಗಿದೆ. ಸತೀಶ್ ನೀನಾಸಂ ಚಿತ್ರದಲ್ಲಿ ಮುಗ್ಧ ಹುಡುಗನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಬ್ರಹ್ಮಚಾರಿ ತನ್ನ ಜೀವನ ಪಯಣದಲ್ಲಿ ಸಂಕಷ್ಟದ ಸಂಕೋಲೆಯನ್ನು ಹೇಗೆ ಕಳಚುತ್ತಾನೆ ಎನ್ನುವುದೇ ಚಿತ್ರದ ಕಥಾಹಂದರ.

ಸತೀಶ್ಗೆ ಅದಿತಿ ಪ್ರಭುದೇವ ಜೋಡಿಯಾಗಿದ್ದಾರೆ. ಚಿತ್ರದ ಮೂರು ಹಾಡುಗಳಿಗೆ ಧರ್ಮವಿಶ್ ಸಂಗೀತ ಸಂಯೋಜಿಸಿದ್ದಾರೆ. ರವಿ ವಿ. ಅವರ ಛಾಯಾಗ್ರಹಣವಿದೆ. ಉದಯ್ ಕೆ. ಮೆಹ್ತಾ ಇದಕ್ಕೆ ಬಂಡವಾಳ ಹೂಡಿದ್ದಾರೆ. ಶಿವರಾಜ್ ಕೆ.ಆರ್. ಪೇಟೆ, ಅಶೋಕ್, ಅಕ್ಷತಾ, ಅಚ್ಯುತ್ಕುಮಾರ್, ಪದ್ಮಜಾ ರಾವ್, ಬಿರಾದಾರ್, ಗಿರಿಜಾ ಲೋಕೇಶ್ ತಾರಾಗಣದಲ್ಲಿದ್ದಾರೆ.

‘ಮನೆ ಮಂದಿಯಲ್ಲಾ ಕುಳಿತು ನೋಡುವ ಸಿನಿಮಾ ಇದು’ ಎಂದು ಸತೀಶ್ ನೀನಾಸಂ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.