ಬೆಂಗಳೂರು: ವಿಭಿನ್ನ ಹಾಸ್ಯ ಚಟಾಕಿ ಮೂಲಕ ಹಲವು ವರ್ಷಗಳ ಕಾಲ ಕನ್ನಡ ಸಿನಿಮಾ ಪ್ರೇಮಿಗಳ ಮುಖದಲ್ಲಿ ಮಂದಹಾಸ ಮೂಡಿಸಿದ್ದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೆಲವು ದಿನಗಳಿಂದ ಗ್ಯಾಸ್ಟ್ರಿಕ್ ಸಮಸ್ಯೆ ಕಾಣಿಸಿಕೊಂಡ ಕಾರಣ ಬುಲೆಟ್ ಪ್ರಕಾಶ್ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿನ ಪೋರ್ಟೀಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐದು ದಿನಗಳಿಂದ ಡಾ. ತೇಜಸ್ವಿ ಅವರು ಪ್ರಕಾಶ್ಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಬುಲೆಟ್ ಪ್ರಕಾಶ್ ಅವರಿಗೆ ಲಿವರ್ ಮತ್ತು ಕಿಡ್ನಿಯಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ವೆಂಟಿಲೇಟರ್ ಮೂಲಕ ಉಸಿರಾಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

‘ಅಪ್ಪನಿಗೆ ಏನೂ ಅಗಿಲ್ಲ. ಚೆನ್ನಾಗಿದ್ದಾರೆ ಗ್ಯಾಸ್ಟ್ರಿಕ್ ಸಮಸ್ಯೆ ಕಾಣಿಸಿಕೊಂಡಿತ್ತು. ಈಗ ಆರೋಗ್ಯ ಸ್ಥಿರವಾಗಿದೆ’ ಎಂದು ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಕೆಲವು ವರ್ಷಗಳ ಹಿಂದೆ ಬುಲೆಟ್ ಪ್ರಕಾಶ್ ದೇಹದ ತೂಕ ಇಳಿಸಿಕೊಳ್ಳಲು ಯತ್ನಿಸಿದ್ದರಿಂದ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿತ್ತು. ಇದರಿಂದ ಅವರು ಚಿತ್ರರಂಗದಿಂದ ಬಹುತೇಕ ದೂರ ಉಳಿದಿದ್ದರು.

42ರ ಹರೆಯದ ಬುಲೆಟ್ ಪ್ರಕಾಶ್ ನಟ ದರ್ಶನ್ ಅವರಿಗೆ ಆಪ್ತರಾಗಿದ್ದರು. ದರ್ಶನ್ ಅಭಿನಯದ ಚಿತ್ರಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದರು. ಈವರೆಗೆ ಅವರು ಸುಮಾರು 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಣ್ಣ ಹಚ್ಚುವಮೂಲಕ ಕನ್ನಡ ಸಿನಿ ಪ್ರೇಮಿಗಳನ್ನು ರಂಜಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.