ತಮಿಳಿನ ಖ್ಯಾತ ನಟ ಧನುಷ್ ಹಾಗೂ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಅಭಿನಯದ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

2024ರ ಸಂಕ್ರಾಂತಿ ಹಬ್ಬದಂದು (ಜನವರಿ 2ನೇ ವಾರ) ಸಿನಿಮಾ ತೆರೆಕಾಣಲಿದೆ ಎಂದು ಚಿತ್ರತಂಡ ಘೋಷಿಸಿದೆ. ಈ ಹಿಂದೆ ಡಿಸೆಂಬರ್ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿತ್ತು. ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾವನ್ನು ಅರುಣ್ ಮಾದೇಶ್ವರನ್ ನಿರ್ದೇಶನ ಮಾಡಿದ್ದು, ಇದು ಧನುಷ್ ಅವರ ವೃತ್ತಿಜೀವನದ ಅತ್ಯಂತ ಬಿಗ್ ಬಜೆಟ್ ಸಿನಿಮಾ ಎಂದು ಗುರುತಿಸಿಕೊಂಡಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್ ಪ್ರೇಕ್ಷಕರನ್ನು ಸೆಳೆದಿದ್ದು, ಈ ಪ್ಯಾನ್ ಇಂಡಿಯಾ ಚಲನಚಿತ್ರವು 2024ರ ಸಂಕ್ರಾಂತಿಯಂದು ಬಿಡುಗಡೆಯಾಗಲಿದೆ.

ಈ ಸಿನಿಮಾವನ್ನು 1930-40ರ ಬ್ಯಾಕ್ಡ್ರಾಪ್ನಲ್ಲಿ ಚಿತ್ರೀಕರಿಸಲಾಗಿದೆ. ‘ಜೈಲರ್’ ಸಿನಿಮಾ ಬಳಿಕ ಶಿವರಾಜ್ಕುಮಾರ್ ನಟಿಸಿರುವ ಎರಡನೇ ತಮಿಳು ಸಿನಿಮಾ ಇದಾಗಿದೆ. ಸಂದೀಪ್ ಕಿಶನ್, ಪ್ರಿಯಾಂಕಾ ಅರುಳ್ ಮೋಹನ್ ಮುಂತಾದವರು ನಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.