ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಪಠಾಣ್ ಚಿತ್ರದ ಹಾಡುಗಳು ಒಳಗೊಂಡಂತೆ ಚಿತ್ರದಲ್ಲಿ ಬದಲಾವಣೆಗಳನ್ನು ಮಾಡಲು ನಿರ್ಮಾಪಕರಿಗೆ ಸೂಚಿಸಲಾಗಿದೆ ಎಂದು ಚಲನಚಿತ್ರ ಪ್ರಮಾಣಪತ್ರದ ಮೇಲಿನ ಸೆನ್ಸಾರ್ ಮಂಡಳಿ (ಸಿಬಿಎಫ್ಸಿ) ಅಧ್ಯಕ್ಷ ಪ್ರಸೂನ್ ಜೋಶಿ ಹೇಳಿದ್ದಾರೆ.

ಚಿತ್ರದಲ್ಲಿನ ಬದಲಾವಣೆ ಕುರಿತಾಗಿನ ಹೆಚ್ಚಿನ ವಿವರ ಲಭ್ಯವಾಗಿಲ್ಲ. ಸಿಬಿಎಫ್ಸಿ ಮಾರ್ಗಸೂಚಿಗೆ ಅನುಗುಣವಾಗಿ ಪರಿಷ್ಕೃತ ಆವೃತ್ತಿಯನ್ನು ಸಲ್ಲಿಸುವಂತೆ ಯಶ್ ರಾಜ್ ಫಿಲ್ಮ್ಸ್ಗೆ ಸೂಚಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಚಿತ್ರದಲ್ಲಿ ಹೊಸತನ ಬಯಸುವ ನಿರ್ಮಾಪಕರ ಮತ್ತು ಪ್ರೇಕ್ಷಕರ ಭಾವನೆಗಳಿಗೆ ಧಕ್ಕೆ ತರದಂತೆ ಸಮತೋಲನ ಕಾಪಾಡಿಕೊಳ್ಳುವುದು ಸಿಬಿಎಫ್ಸಿ ಗುರಿಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:Pathaan Row: ಶಾರುಖ್ರನ್ನು ಜೀವಂತವಾಗಿ ಸುಟ್ಟುಹಾಕುತ್ತೇನೆ: ಅಯೋಧ್ಯೆ ಸ್ವಾಮೀಜಿ

ಇತ್ತೀಚೆಗಷ್ಟೇ ಚಿತ್ರದ ಪ್ರಮಾಣೀಕರಣಕ್ಕಾಗಿ ಸಿಬಿಎಫ್ಸಿಗೆ ಚಿತ್ರವನ್ನು ಸಲ್ಲಿಸಲಾಗಿತ್ತು.

ಬಹುನಿರೀಕ್ಷಿತ ಪಠಾಣ್ ಚಿತ್ರದ ಬೇಷರಮ್ ರಂಗ್ ಹಾಡಿನಲ್ಲಿ ನಾಯಕಿ ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಹಾಕಿಕೊಂಡು ಕಾಣಿಸಿಕೊಂಡಿರುವುದು ಒಂದು ವರ್ಗದ ಆಕ್ರೋಶಕ್ಕೆ ಗುರಿಯಾಗಿತ್ತು. ದೇಶದ ವಿವಿಧೆಡೆ ಪ್ರತಿಭಟನೆ ನಡೆದಿತ್ತಲ್ಲದೆ ಚಿತ್ರವನ್ನು ನಿಷೇಧಿಸುವಂತೆ ಒತ್ತಾಯ ಹೇರಲಾಗಿತ್ತು.

ಸಿದ್ಧಾರ್ಥ್ ಆನಂದ್ ನಿರ್ದೇಶನದ ಪಠಾಣ್ ಚಿತ್ರ 2023ರಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.