ಬೆಂಗಳೂರು: ನಗರದಲ್ಲಿ ಅವ್ಯಾಹತವಾಗಿರುವ ಡ್ರಗ್ ದಂಧೆ ಬಗ್ಗೆ ಚುರುಕಿನ ತನಿಖೆ ಕೈಗೊಂಡಿರುವ ಸಿಸಿಬಿ ಪೊಲೀಸರು, ನಟಿ ರಾಗಿಣಿ ದ್ವಿವೇದಿ ಅವರ ಸ್ನೇಹಿತ ಎನ್ನಲಾದ ರವಿ ಎಂಬಾತನನ್ನು ಬಂಧಿಸಿದ್ದಾರೆ.

ನಟಿಯರಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ಅನುಮಾನದಡಿ ರವಿಯನ್ನು ಬುಧವಾರವೇ ವಶಕ್ಕೆ ಪಡೆದಿದ್ದ ಪೊಲೀಸರು, ರಾತ್ರಿಯಿಡಿ ವಿಚಾರಣೆ ನಡೆಸಿದ್ದರು. ಅವರು ಭಾಗಿಯಾಗಿದ್ದಕ್ಕೆ ಪುರಾವೆಗಳು ಸಿಗುತ್ತಿದ್ದಂತೆ ಆರೋಪಿಯನ್ನು ಬಂಧಿಸಿದ್ದಾರೆ. ನ್ಯಾಯಾಲಯದ ಎದುರು ಆರೋಪಿಯನ್ನು ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಆರೋಪಿ ರವಿ, ಸಾರಿಗೆ ಇಲಾಖೆ ನೌಕರ. ಹಲವು ವರ್ಷಗಳಿಂದ ರಾಗಿಣಿ ಅವರ ಜೊತೆಯಲ್ಲಿ ಒಡನಾಟವಿಟ್ಟುಕೊಂಡಿದ್ದ.
‘ಡ್ರಗ್ ಪೆಡ್ಲರ್ ಜೊತೆ ಸಂಪರ್ಕವಿಟ್ಟುಕೊಂಡಿದ್ದ ರವಿಯನ್ನು ಬಂಧಿಸಲಾಗಿದೆ. ಆತನನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ’ ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.

ಇನ್ನಷ್ಟು...

ಡ್ರಗ್ಸ್ ದಂಧೆ | ಎಷ್ಟೇ ಪ್ರಭಾವಿಗಳಿದ್ದರೂ ಶಿಕ್ಷೆಗೆ ಒಳಪಡಿಸುತ್ತೇವೆ: ಬೊಮ್ಮಾಯಿ

ಡ್ರಗ್ಸ್ ದಂಧೆ: ನಾಳೆಯೇ ವಿಚಾರಣೆಗೆ ಬನ್ನಿ;ನಟಿ ರಾಗಿಣಿಗೆ ಪೊಲೀಸರ ಎಚ್ಚರಿಕೆ

ಡ್ರಗ್ಸ್ ದಂಧೆ |ಸಿಸಿಬಿ ಕಚೇರಿಗೆ ಸೋಮವಾರ ಹೋಗುವೆ: ರಾಗಿಣಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.