ರ್ಯಾಪ್ ಹಾಡುಗಳ ಮೂಲಕ ಕನ್ನಡ ಪ್ರೇಕ್ಷಕರನ್ನು ಕುಣಿಸಿದ ಸಂಗೀತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ ಇದೀಗ ಸಿನಿಮಾ ಹೀರೊ. ‘ಎಲ್ರ ಕಾಲೆಳಿಯತ್ತೆ ಕಾಲ’ ಚಿತ್ರದಲ್ಲಿ ರೆಟ್ರೊ ಲುಕ್ನಲ್ಲಿ ಚಂದನ್ ಕಾಣಿಸಿಕೊಳ್ಳುತ್ತಿದ್ದು, ನಟಿ ಅರ್ಚನಾ ಕೊಟ್ಟಿಗೆ ಜೊತೆ ಪಯಣ ಆರಂಭಿಸಿದ್ದಾರೆ.

ಹಾಸ್ಯ ಪಾತ್ರಗಳ ಮೂಲಕ ಹೆಸರು ಮಾಡಿರುವ ನಟ ಸುಜಯ್ ಶಾಸ್ತ್ರಿ ಈ ಚಿತ್ರದ ನಿರ್ದೇಶಕ. ಚಿತ್ರದ ಮುಹೂರ್ತ ಇತ್ತೀಚೆಗೆ ಧರ್ಮಗಿರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನಡೆಯಿತು.

ಚಿತ್ರದ ಕುರಿತು ಮಾತನಾಡಿದ ಸುಜಯ್ ಶಾಸ್ತ್ರಿ, ‘ನಾನು ಹಾಗೂ ರಾಜ್ ಗುರು ಸೇರಿ ಕಥೆ ಮಾಡಿಕೊಂಡೆವು. 1980 ರಿಂದ 90ರ ಕಾಲಘಟ್ಟದಲ್ಲಿ ನಡೆಯುವ ಕಥೆಯಿದು. ಕಥೆಯ ಬಗ್ಗೆ ಜಾಸ್ತಿ ಹೇಳುವುದಿಲ್ಲ. ಈ ಚಿತ್ರದ ನಾಯಕನಾಗಿ ಚಂದನ್ ಶೆಟ್ಟಿ, ನಾಯಕಿಯಾಗಿ ಅರ್ಚನಾ ಕೊಟ್ಟಿಗೆ ಅಭಿನಯಿಸುತ್ತಿದ್ದಾರೆ. ತಾರಾ, ಮಂಡ್ಯ ರಮೇಶ್, ಮಂಜು ಪಾವಗಡ, ನಾಗರಾಜ್ ಮೂರ್ತಿ ಮುಂತಾದವರ ತಾರಾಬಳಗ ಈ ಚಿತ್ರದಲ್ಲಿದೆ. ನಾನು ಕೂಡ ಅಭಿನಯಿಸುತ್ತಿದ್ದೇನೆ’ ಎಂದರು.

‘ಇಷ್ಟು ದಿನ ನನ್ನ ಹಾಡು, ಸಂಗೀತಕ್ಕೆ ಜನರ ಬೆಂಬಲ ದೊರಕಿದೆ. ಈಗ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದೇನೆ. ‘ವಿಜಯ್’ ನನ್ನ ಪಾತ್ರದ ಹೆಸರು. ಈ ಚಿತ್ರದಲ್ಲಿ ಕಾಲೇಜು ವಿದ್ಯಾರ್ಥಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ’ ಎನ್ನುತ್ತಾರೆ ಚಂದನ್ ಶೆಟ್ಟಿ.

ಉಷಾ ಗೋವಿಂದರಾಜು ನಿರ್ಮಾಣದ ಈ ಚಿತ್ರಕ್ಕೆ ವಿಶ್ವಜಿತ್ ರಾವ್ ಅವರ ಛಾಯಾಗ್ರಹಣವಿದೆ. ಬಾಲು ಕುಮಟಾ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.