ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಸಿನಿಮಾ ನಿರ್ದೇಶನದತ್ತ ಹೆಜ್ಜೆ ಇಟ್ಟಿದ್ದಾರೆ. ತಮ್ಮ ನಿರ್ದೇಶನದ ಚೊಚ್ಚಲ ಸಿನಿಮಾದಲ್ಲೇ ಪ್ರಜ್ವಲ್ ದೇವರಾಜ್‌ಗೆ ಆ್ಯಕ್ಷನ್ ಕಟ್ ಹೇಳಲು ರಾಜ ಕಲೈ ಸಜ್ಜಾಗಿದ್ದಾರೆ.

ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರಕ್ಕೆ ‘ಚೀತಾ’ ಎಂಬ ಶೀರ್ಷಿಕೆ ಇಡಲಾಗಿದೆ. ಕನ್ನಡ ರಾಜ್ಯೋತ್ಸವದಂದೇ ಚಿತ್ರದ ಶೀರ್ಷಿಕೆ ಅನಾವರಣಗೊಂಡಿದೆ. ‘ಕಳೆದ 23 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಡ್ಯಾನ್ಸರ್ ಆಗಿ, ಡ್ಯಾನ್ಸ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸಿದ್ದೇನೆ. ಪ್ರಜ್ವಲ್ ಅವರ 39ನೇ ಚಿತ್ರವನ್ನು ನಾನು ನಿರ್ದೇಶಿಸುತ್ತಿದ್ದೇನೆ. ಇದೊಂದು ಮಾರ್ಕೆಟ್‌ನಲ್ಲಿ ನಡೆಯುವ ಕಥೆ. ಮಾರ್ಕೆಟ್‌ನಲ್ಲಿನ ವ್ಯಾಪಾರ, ವಹಿವಾಟು ಹಾಗೂ ಅಲ್ಲಿ ಕೆಲಸ ಮಾಡುವವರು ಎಲ್ಲವುದಕ್ಕೂ ವೇಗವಿದೆ. ನಮ್ಮ ಚಿತ್ರದ ನಾಯಕ ಕೂಡ ಚಿರತೆಯಷ್ಟೇ ವೇಗದವನು. ಹೀಗಾಗಿ ಈ ಶೀರ್ಷಿಕೆ ಇಡಲಾಗಿದೆ. ಕಲಾ ನಿರ್ದೇಶಕ ಶಿವು ಅವರು ಅದ್ದೂರಿ ಮಾರ್ಕೆಟ್ ಸೆಟ್ ನಿರ್ಮಾಣ ಮಾಡುತ್ತಿದ್ದಾರೆ. ಆ ಸೆಟ್‌ನಲ್ಲೇ ಚಿತ್ರದ ಬಹುತೇಕ ಚಿತ್ರೀಕರಣ ನಡೆಯಲಿದೆ’ ಎನ್ನುತ್ತಾರೆ ರಾಜ ಕಲೈ ಕುಮಾರ್.

ಶ್ರುತಿ ಹರಿಹರನ್, ಗುರುರಾಜ್ ಜಗ್ಗೇಶ್, ಶಿವರಾಜ ಕೆ.ಆರ್ ಪೇಟೆ, ತೆಲುಗು ನಟ ಸುನೀಲ್, ಗೋವಿಂದೇ ಗೌಡ, ಅಭಯ್ ಪುನೀತ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ನ.6ರಿಂದ ಚಿತ್ರೀಕರಣ ಆರಂಭವಾಗಲಿದೆ ಎಂದಿದೆ ಚಿತ್ರತಂಡ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.