ಡಾರ್ಲಿಂಗ್ ಕೃಷ್ಣ ಹಾಗೂ ಪ್ರಕಾಶ್ ರಾಜ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ‘ಫಾದರ್’ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಇತ್ತೀಚೆಗಷ್ಟೇ ಪೂರ್ಣಗೊಂಡಿದೆ.

ಆರ್.ಚಂದ್ರು ಅವರು ಆರ್ ಸಿ ಸ್ಟುಡಿಯೋಸ್ ನಿರ್ಮಾಣ ಮಾಡುತ್ತಿರುವ ಚಿತ್ರಕ್ಕೆ ರಾಜ್ ಮೋಹನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಬೆಂಗಳೂರು, ಆನೇಕಲ್, ಚನ್ನಪಟ್ಟಣ, ಮಂಗಳೂರು, ಧರ್ಮಸ್ಥಳ ಮುಂತಾದ ಕಡೆ ಚಿತ್ರೀಕರಣ ನಡೆದಿದೆ ಎಂದು ಚಿತ್ರತಂಡ ಹೇಳಿದೆ.

‘ಬಾಕಿಯಿರುವ ಎರಡು ಹಾಡುಗಳ ಚಿತ್ರೀಕರಣವನ್ನು ಸದ್ಯದಲ್ಲೇ ಪೂರ್ಣಗೊಳಿಸಿ, ಆದಷ್ಟು ಬೇಗ ಚಿತ್ರವನ್ನು ತೆರೆಗೆ ತರುತ್ತೇವೆ. ನಮ್ಮ ಸಂಸ್ಥೆಯಿಂದ ಈಗಾಗಲೇ ಘೋಷಿಸಿರುವ ಉಳಿದ ನಾಲ್ಕು ಚಿತ್ರಗಳಿಗೂ ಶೀಘ್ರದಲ್ಲಿಯೇ ಚಾಲನೆ ನೀಡಲಾಗುವುದು’ ಎಂದು ಆರ್.ಚಂದ್ರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.