ನವದೆಹಲಿ: ಹೃದಯಾಘಾತದಿಂದ ಬುಧವಾರ ಏಮ್ಸ್ಗೆ ದಾಖಲಾಗಿರುವ ಹಾಸ್ಯನಟ ರಾಜು ಶ್ರೀವಾಸ್ತವ ಅವರನ್ನು ಕೃತಕ ಉಸಿರಾಟದ ವ್ಯವಸ್ಥೆಯಲ್ಲಿರಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ಟ್ವೀಟ್ ಮಾಡಿದೆ.

ಪ್ರಸ್ತುತ ಅವರು, ಕೊರೊನರಿ ಕೇರ್ ಯುನಿಟ್ನಲ್ಲಿ (ಸಿಸಿಯು) ಇದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

58 ವರ್ಷದ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಅವರನ್ನು ಬುಧವಾರ ಬೆಳಿಗ್ಗೆ 10:45 ರ ಸುಮಾರಿಗೆ ತುರ್ತು ಚಿಕಿತ್ಸೆಗಾಗಿ ಏಮ್ಸ್ಸಗೆ ದಾಖಲಿಸಲಾಗಿದೆ.

‘ರಾಜು ಅವರಿಗೆ ಆಂಜಿಯೋಪ್ಲ್ಯಾಸ್ಟ್ ಮಾಡಲಾಗಿದ್ದು, ಪರಿಧಮನಿಯ ಚಿಕಿತ್ಸಾ ಘಟಕಕ್ಕೆ (ಸಿಸಿಯು) ದಾಖಲಿಸಲಾಗಿದೆ’ಎಂದು ಮೂಲಗಳು ತಿಳಿಸಿವೆ.

1980 ರಲ್ಲಿ ಸ್ಟ್ಯಾಂಡ್-ಅಪ್ ಕಾಮಿಡಿ ಶೋ ‘ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್’ ಮೊದಲ ಆವೃತ್ತಿ ಮೂಲಕ ಗುರುತಿಸಿಕೊಂಡಿದ್ದ ಅವರು, ಅಂದಿನಿಂದ ಮನರಂಜನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.