ನವದೆಹಲಿ: ಹೃದಯಾಘಾತದ ಕಾರಣ ಏಮ್ಸ್ಗೆ ದಾಖಲಾಗಿರುವ ಹಾಸ್ಯ ಕಲಾವಿದ ರಾಜು ಶ್ರೀವಾಸ್ತವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆ ಮೂಲಗಳು ಶುಕ್ರವಾರ ತಿಳಿಸಿವೆ.

ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜು ಶ್ರೀವಾಸ್ತವ ಅವರನ್ನು ಕೃತಕ ಉಸಿರಾಟದ ವ್ಯವಸ್ಥೆಯಲ್ಲಿರಿಸಲಾಗಿದೆ.

ಕಳೆದ 46 ಗಂಟೆಗಳಿಂದ ರಾಜು ಅವರಿಗೆ ಪ್ರಜ್ಞೆ ಬಂದಿಲ್ಲ. ಅವರ ಮಿದುಳಿಗೆ ಹಾನಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜು ಶ್ರೀವಾಸ್ತವ ಅವರ ಪತ್ನಿ ಶಿಖಾ ಅವರಿಗೆ ದೂರವಾಣಿ ಕರೆ ಮಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಜತೆಗೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶ್ರೀವಾಸ್ತವ್ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ.

58 ವರ್ಷದ ಶ್ರೀವಾಸ್ತವ ಅವರು ಬುಧವಾರ ಜಿಮ್ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಅವರನ್ನು ದೆಹಲಿಯ ಏಮ್ಸ್ಗೆ ದಾಖಲಾಗಿತ್ತು.

1980ರಲ್ಲಿ ಸ್ಟ್ಯಾಂಡ್-ಅಪ್ ಕಾಮಿಡಿ ಶೋ ‘ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್’ ಮೊದಲ ಆವೃತ್ತಿ ಮೂಲಕ ಗುರುತಿಸಿಕೊಂಡಿದ್ದ ಅವರು, ಅಂದಿನಿಂದ ಮನೋರಂಜನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.