‘ಭೀಮ’ ಸಿನಿಮಾದಲ್ಲಿ ‘ಗಿರಿಜಾ’ ಹೆಸರಿನ ಪೊಲೀಸ್ ಅಧಿಕಾರಿ ಪಾತ್ರಕ್ಕೆ ಬಣ್ಣಹಚ್ಚಿದ್ದ ನಟಿ ಪ್ರಿಯಾ ಶಠಮರ್ಷಣ ಇದೀಗ ‘ಕಸ್ಟಡಿ’ ಎಂಬ ಸಿನಿಮಾದಲ್ಲೂ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಬೃಂದಾವನ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಾಗೇಶ್ ಕುಮಾರ್ ಯು.ಎಸ್. ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಜೆ.ಜೆ.ಶ್ರೀನಿವಾಸ್ ನಿರ್ದೇಶನವಿದೆ. ಬೆಂಗಳೂರಿನ ಟೊರಿನೊ ಫ್ಯಾಕ್ಟರಿ ಆವರಣದಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ‘ಸೈಬರ್ ಕ್ರೈಂ ಕುರಿತಾದ ಕಥಾಹಂದರ ಹೊಂದಿರುವ ‘ಕಸ್ಟಡಿ’ ಚಿತ್ರದಲ್ಲಿ ಮೊಬೈಲ್ ಸುತ್ತ ಚಿತ್ರದ ಕಥೆ ನಡೆಯುತ್ತದೆ. ಸೈಬರ್ ಕ್ರೈಂನ ಕುರಿತಾದ ಕಥೆಗಳು ಸಾಕಷ್ಟು ಬಂದಿವೆಯಾದರೂ ಈ ಕಥೆ ಭಿನ್ನವಾಗಿದೆ. ವರ್ಷದ ಹಿಂದೆ ಈ ಚಿತ್ರದ ಕಥೆ ಸಿದ್ಧವಾಗಿತ್ತು. ಚಿತ್ರದಲ್ಲಿ ಖಡಕ್ ಪೊಲೀಸ್ ಅಧಿಕಾರಿ ಪಾತ್ರದ ಅನ್ವೇಷಣೆಯಲ್ಲಿದ್ದಾಗ ಪ್ರಿಯಾ ಅವರು ಈ ಪಾತ್ರ ಮಾಡಬಹುದು ಅನಿಸಿತು. ಅವರು ಕಥೆ ಕೇಳಿ ಒಪ್ಪಿಕೊಂಡರು. ಚಿತ್ರೀಕರಣ ಮುಕ್ತಾಯದ ಹಂತ ತಲುಪಿದೆ. ಕಾಕ್ರೋಚ್ ಸುಧಿ ಅವರೂ ಈ ಚಿತ್ರದ ಮುಖ್ಯಪಾತ್ರದಲ್ಲಿದ್ದಾರೆ’ ಎಂದರು ಶ್ರೀನಿವಾಸ್.

‘ನನ್ನ ‘ಗಿರಿಜಾ’ ಪಾತ್ರಕ್ಕೆ ಜನ ನೀಡಿದ ಪ್ರೀತಿಗೆ ಆಭಾರಿ. ಈ ಚಿತ್ರದಲ್ಲೂ ನಾನು ಖಡಕ್ ಪೊಲೀಸ್ ಅಧಿಕಾರಿ. ‘ದುರ್ಗಾಪರಮೇಶ್ವರಿ’ ನನ್ನ ಪಾತ್ರದ ಹೆಸರು. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕಥೆಯನ್ನು ನಿರ್ದೇಶಕರು ಹೆಣೆದಿದ್ದಾರೆ. ನಾನು ಈ ಚಿತ್ರ ಒಪ್ಪಿಕೊಳ್ಳಲು ಪ್ರಮುಖ ಕಾರಣ ಇದುವೇ’ ಎಂದರು ಪ್ರಿಯಾ. ನಾಗೇಂದ್ರ ಅರಸ್, ಚಿಂಗಾರಿ ಮಹಾದೇವ್, ಮ್ಯಾಜಿಕ್ ರಮೇಶ್, ಮಧು ಕೆ.ಆರ್ ಪೇಟೆ, ಪವನ್ ಕುಮಾರ್, ಆರಾಧ್ಯ, ಕುಮಾರ್ ಶ್ರೀನಿವಾಸಮೂರ್ತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಶಂಕರ್ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.