‘ದಿಯಾ’ ಸಿನಿಮಾ ಮುಖಾಂತರ ಚಂದನವನದಲ್ಲಿ ಹೆಸರು ಮಾಡಿದ್ದ ನಟ ದೀಕ್ಷಿತ್ ಶೆಟ್ಟಿ, ಟಾಲಿವುಡ್ಗೆ ಕಾಲಿರಿಸಿದ್ದಾರೆ. ‘ಆಣಿ ಮುತ್ತುಗಳು’ ಚಿತ್ರದಲ್ಲಿ ನಾಯಕರಾಗಿ ದೀಕ್ಷಿತ್ ವಿಶೇಷ ಪಾತ್ರಕ್ಕೆ ಬಣ್ಣಹಚ್ಚಿದ್ದಾರೆ. ಇದು ತೆಲುಗಿನಲ್ಲಿ ಸಿದ್ಧವಾಗಿರುವ ಕಾಮಿಡಿ ಮತ್ತು ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯ ಸಿನಿಮಾವಾಗಿದೆ. ಈ ಚಿತ್ರವು ಕನ್ನಡಕ್ಕೂ ಡಬ್ ಆಗಿದೆ.

ಚಿತ್ರಮಂದಿರ ಸ್ಟುಡಿಯೋಸ್ ಬ್ಯಾನರ್ನಲ್ಲಿ ಅಚ್ಯುತ್ ರಾಮಾರಾವ್ ನಿರ್ಮಾಣ ಮಾಡಿರುವ ಆಣಿ ಮುತ್ತುಗಳು ಚಿತ್ರವನ್ನು ಅಭಿಷೇಕ್ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಮೂಗ, ಕಿವುಡ ಮತ್ತು ಕುರುಡ ಈ ಮೂವರ ಹಿನ್ನೆಲೆಯಲ್ಲಿ ಇಡೀ ಚಿತ್ರ ಸಾಗಲಿದ್ದು, ಇದರಲ್ಲಿ ಮೂಗನ ಪಾತ್ರದಲ್ಲಿ ದೀಕ್ಷಿತ್ ಶೆಟ್ಟಿ ನಟಿಸಿದ್ದಾರೆ. ಇನ್ನುಳಿದಂತೆ ಕಿವುಡನ ಪಾತ್ರದಲ್ಲಿ ಶ್ರೀನಿವಾಸ್ ರೆಡ್ಡಿ, ಕುರುಡನ ಪಾತ್ರದಲ್ಲಿ ಅಚ್ಯುತ್ ರಾಮ್ ರಾವ್ ನಟಿಸಿದ್ದಾರೆ.

ಕಾಮಿಡಿ ಜೊತೆಗೆ ರೋಚಕ ತಿರುವುಗಳುಳ್ಳ ಸಸ್ಪೆನ್ಸ್ ಕಥೆಯೂ ಈ ಚಿತ್ರದಲ್ಲಿದೆ. ಪೊಲೀಸ್ ತನಿಖೆ, ಕೊಲೆ, ಹುಡುಕಾಟ ಇದೆಲ್ಲದರ ನಡುವೆ ಮುದ್ದಾದ ಪ್ರೇಮ ಕಥೆಯೂ ಸಿನಿಮಾದಲ್ಲಿದೆ ಎನ್ನುತ್ತಾರೆ ನಿರ್ದೇಶಕರು. ಕಿವಿ ಕೇಳಿಸದ, ಮಾತು ಬಾರದ ಮತ್ತು ಕಣ್ಣು ಕಾಣದ ಮೂವರು ಈ ಚಿತ್ರದಲ್ಲಿ ಸ್ನೇಹಿತರಾಗಿ ಕಾಣಿಸಿಕೊಂಡಿದ್ದಾರೆ. ತ್ವಿಷಾ ಶರ್ಮಾ ನಾಯಕಿಯಾಗಿ ನಟಿಸಿದ್ದು, ದೀಕ್ಷಿತ್ ಶೆಟ್ಟಿಗೆ ಜೋಡಿಯಾಗಿದ್ದಾರೆ. ನಟಿ ಶ್ವೇತಾ ವರ್ಮಾ ಸಹ ಪ್ರಮುಖ ಪಾತ್ರದಲ್ಲಿದ್ದಾರೆ.

ಇನ್ನುಳಿದಂತೆ ಅಪ್ಪಾರ್ಲ ಸಾಯಿ ಕಲ್ಯಾಣ್ ಕಥೆ, ಚಿತ್ರಕಥೆ ಬರೆದರೆ, ಗರುಡವೇಗ ಅಂಜಿ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಸುರೇಶ್ ಬೊಬ್ಲಿ ಸಂಗೀತ ನೀಡಿದ್ದಾರೆ. ಈಗಾಗಲೇ ಚಿತ್ರತಂಡವು ಚಿತ್ರಬಿಡುಗಡೆಗಿದ್ದ ಬಹುತೇಕ ಎಲ್ಲ ಕೆಲಸಗಳನ್ನು ಮುಗಿಸಿಕೊಂಡಿದ್ದು, ಲಾಕ್ಡೌನ್ ಸಡಿಲವಾಗಿ, ಸಿನಿಮಾ ಬಿಡುಗಡೆಗೆ ಅವಕಾಶ ಸಿಗುತ್ತಿದ್ದಂತೆ ಚಿತ್ರ ಕನ್ನಡ ಮತ್ತು ತೆಲುಗಿನಲ್ಲಿ ತೆರೆ ಕಾಣಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.