‘ಆರ್‌ಆರ್‌ಆರ್’ ಚಿತ್ರ ಹಾಗೂ ‘ನಾಟು ನಾಟು’ ಹಾಡಿನ ಮೂಲಕ ವಿಶ್ವದ ಗಮನಸೆಳೆದ ನಟ ಜ್ಯೂನಿಯರ್ ಎನ್‌ಟಿಆರ್ ಅವರ ಮುಂದಿನ ಸಿನಿಮಾ ಯಾವುದು ಎನ್ನುವುದಕ್ಕೆ ಉತ್ತರ ದೊರಕಿದೆ.

ಕೊರಟಾಲ ಶಿವ ಆ್ಯಕ್ಷನ್ ಕಟ್ ಹೇಳುತ್ತಿರುವ ಹೊಸ ಚಿತ್ರದಲ್ಲಿ ಜ್ಯೂ. ಎನ್‌ಟಿಆರ್ ವಿಭಿನ್ನವಾದ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಚಿತ್ರೀಕರಣ ಆರಂಭವಾಗಿದ್ದರೂ, ಚಿತ್ರತಂಡ ಇದುವರೆಗೂ ಶೀರ್ಷಿಕೆಯನ್ನು ಘೋಷಿಸಿರಲಿಲ್ಲ. ಜ್ಯೂ. ಎನ್‌ಟಿಆರ್ ಜನ್ಮದಿನದ ಸಂದರ್ಭದಂದು ಚಿತ್ರದ ಶೀರ್ಷಿಕೆ ಘೋಷಿಸಲಾಗಿದೆ. ಚಿತ್ರಕ್ಕೆ ‘ದೇವರ’ ಎಂಬ ಟೈಟಲ್ ಇಡಲಾಗಿದ್ದು, ಸಿನಿಮಾದ ಫಸ್ಟ್‌ಲುಕ್ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ಪೋಸ್ಟರ್‌ನಲ್ಲಿ ಜ್ಯೂ. ಎನ್‌ಟಿಆರ್ ಕಪ್ಪು ಬಣ್ಣದ ಲುಂಗಿ ಮತ್ತು ಅಂಗಿ ತೊಟ್ಟು, ಸಮುದ್ರದ ಬದಿ ಬಂಡೆಗಳ ಮೇಲೆ ಕೊಡಲಿ ಹಿಡಿದು ನಿಂತು ತೀಕ್ಷ್ಣವಾಗಿ ನೋಡುವ ದೃಶ್ಯವಿದೆ. ಸಮುದ್ರದ ತೀರದಲ್ಲಿ ತೇಲುವ ಹೆಣಗಳ ರಾಶಿ ಚಿತ್ರದ ಜಾನರ್ ಬಗ್ಗೆ ಸುಳಿವು ನೀಡುತ್ತಿದೆ.

‘ದೇವರ’ ಚಿತ್ರದ ಮೂಲಕ ಖ್ಯಾತ ನಟಿ ದಿವಂಗತ ಶ್ರೀದೇವಿ ಅವರ ಪುತ್ರಿ ಜಾಹ್ನವಿ ಕಪೂರ್ ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಹೆಜ್ಜೆ ಇಡುತ್ತಿದ್ದಾರೆ. ಜೊತೆಗೆ ಬಾಲಿವುಡ್‌ನ ಖ್ಯಾತ ನಟ ಸೈಫ್ ಅಲಿ ಖಾನ್ ಖಳನಟನಾಗಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ ಎಂದಿದೆ ಚಿತ್ರತಂಡ. ಯುವಸುಧಾ ಆರ್ಟ್ಸ್ ಮತ್ತು ಎನ್‌ಟಿಆರ್ ಆರ್ಟ್ಸ್‌ನಡಿ ಸುಧಾಕರ್ ಮಿಕ್ಕಿಲಿನೇನಿ ಮತ್ತು ಹರಿಕೃಷ್ಣ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

2024ರ ಏಪ್ರಿಲ್ 5ರಂದು ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ‘ದೇವರ’ ಬಿಡುಗಡೆಯಾಗಲಿದ್ದು, ಈ ಚಿತ್ರಕ್ಕೆ ಅನಿರುದ್ಧ್ ಸಂಗೀತ, ರತ್ನವೇಲು ಛಾಯಾಚಿತ್ರಗ್ರಹಣ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.