ಗೋಪಾಲ್ ಹಳೇಪಾಳ್ಯ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ‘ನೈಸ್ ರೋಡ್’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು.

ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ ಈ ಚಿತ್ರದಲ್ಲಿ ನಟ ಧರ್ಮ ಮುಖ್ಯಭೂಮಿಕೆಯಲ್ಲಿದ್ದಾರೆ. ‘ಕಳೆದ ಜನ್ಮದಲ್ಲಿ ಮಾಡಿದ ತಪ್ಪಗೆ ಈ ಜನ್ಮದಲ್ಲಿ ಶಿಕ್ಷೆ ಕೊಡುವುದು ಯಾವ ನ್ಯಾಯ ಎನ್ನುವ ಅಂಶವನ್ನಿಟ್ಟುಕೊಂಡು ಕರ್ಮ ಮತ್ತು ಧರ್ಮದ ಮೇಲೆ ಚಿತ್ರದ ಕಥೆ ಹೆಣೆಯಲಾಗಿದೆ’ ಎಂದಿದೆ ಚಿತ್ರತಂಡ. ನಿರ್ದೇಶನದ ಜೊತೆಗೆ ಪುನರ್ ಗೀತಾ ಸಿನಿಮಾಸ್ ಬ್ಯಾನರ್ ಅಡಿ ಗೋಪಾಲ್ ಹಳೇಪಾಳ್ಯ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

‘ಈ ಹಿಂದೆ ನಾನು ‘ತಾಂಡವ’ ಎಂಬ ಸಿನಿಮಾ ನಿರ್ದೇಶನ ಮಾಡಿದ್ದೆ. ‘ನೈಸ್ ರೋಡ್’ ಪಾಪ, ಪುಣ್ಯ, ಪುನರ್ಜನ್ಮನದ ವಿಷಯವಿಟ್ಟುಕೊಂಡು ಮಾಡಿದ ಚಿತ್ರ. ಈ ಕಥೆ ಬರೆಯುವಾಗಲೇ ಇನ್ವೆಸ್ಟಿಗೇಷನ್ ಆಫೀಸರ್ ಪಾತ್ರಕ್ಕೆ ಧರ್ಮ ಅವರನ್ನು ಆಯ್ಕೆ ಮಾಡಿಕೊಂಡಿದ್ದೆ. ಮತ್ತೊಂದು ಮುಖ್ಯ ಪಾತ್ರದಲ್ಲಿ ಜೋತಿ ರೈ ಕಾಣಿಸಿಕೊಂಡಿದ್ದಾರೆ. ಗೋವಿಂದೇಗೌಡ, ಮಂಜುನಾಥ್ ರಂಗಾಯಣ ಸೇರಿದಂತೆ ಸಾಕಷ್ಟು ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. 25 ದಿನಗಳ ಕಾಲ ಬೆಂಗಳೂರು, ಕುಣಿಗಲ್ ಸುತ್ತಮುತ್ತ ಶೂಟಿಂಗ್ ಮಾಡಲಾಗಿದೆ. ಇದೊಂದು ಕಾಲ್ಪನಿಕ ಕಥೆಯಾಗಿದ್ದು ಜುಲೈ ಕೊನೆಯ ವಾರ ರಿಲೀಸ್ ಮಾಡುವ ಯೋಚನೆ ಇದೆ. ಬೆಂಗಳೂರಿನ ನೈಸ್ ರೋಡ್ಗೂ ಚಿತ್ರಕ್ಕೂ ಸಂಬಂಧವಿಲ್ಲ’ ಎಂದು ಗೋಪಾಲ್ ಹೇಳಿದರು. ಚಿತ್ರಕ್ಕೆ ಪ್ರವೀಣ್ ಶೆಟ್ಟಿ ಛಾಯಾಚಿತ್ರಗ್ರಹಣವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.