ಬಹುತೇಕ ಹೊಸಬರಿಂದಲೇ ಕೂಡಿರುವ ‘ಧೀರ ಭಗತ್ ರಾಯ್’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ದುನಿಯಾ ವಿಜಯ್ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಕರ್ಣನ್ ಅವರ ಚೊಚ್ಚಲ ನಿರ್ದೇಶನದ ಚಿತ್ರವಿದು.

‘ಸಮಾನತೆಗೆ ಒತ್ತು ಕೊಡುವ ಚಿತ್ರವಿದು. ಸಮಾನತೆ ಎಂದರೆ ನನಗೆ ಹೆಮ್ಮೆ. ಹೋರಾಟಗಾರರ ಕಥೆ ಅಂದ್ರೆ ನನಗೆ ಇಷ್ಟ. ಹೋರಾಟದ ಕಥೆಗಳಲ್ಲಿ ಕಿಚ್ಚು ಇರುತ್ತದೆ. ನ್ಯಾಯ, ನೀತಿಗೆ ಜಾಗವಿರುತ್ತದೆ. ಹೀಗಾಗಿ ನಾನು ಈ ಚಿತ್ರ ತಂಡದ ಜೊತೆ ನಿಂತಿದ್ದೇನೆ. ಹೊಸ ತಂಡ, ಹೊಸಬರು ಮಾಡುವಂತಹ ಕಥೆಗಳು ವಿಭಿನ್ನವಾಗಿರುತ್ತವೆ. ನಾವು ಸಿನಿಮಾ ಮಾಡುವಾಗಲೇ ತುಂಬಾ ಕಷ್ಟ ಇತ್ತು. ಆದರೆ ಈಗ ಇನ್ನೂ ಕಷ್ಟ ಜಾಸ್ತಿ ಇದೆ. ಒಂದು ಚಿತ್ರ ಮಾಡುವುದೆಂದರೆ ಏಳೆಂಟು ಜನ್ಮ ಎತ್ತಿದ ಹಾಗೆ. ನೀವೆಲ್ಲರೂ, ನಾವೆಲ್ಲರೂ ಕಥೆಯನ್ನು ಆರಾಧಿಸೋಣ. ಕಥೆ ಗೆದ್ದರೆ ನಾವು ಗೆಲ್ಲುತ್ತೇವೆ. ನಮ್ಮನ್ನು ನಾವು ಆರಾಧಿಸಿಕೊಳ್ಳುವುದು ಬೇಡ’ ಎಂದರು ವಿಜಯ್.

ಭೂ ಸುಧಾರಣೆ ಕಾಯ್ದೆ ಹಿನ್ನೆಲೆಯ ಕಥೆಯನ್ನು ಹೊಂದಿರುವ ಚಿತ್ರ ಡಿಸೆಂಬರ್ನಲ್ಲಿ ತೆರೆಗೆ ಬರಲಿದೆ. ರಾಕೇಶ್ ದಳವಾಯಿ ಚಿತ್ರದ ನಾಯಕ. ಸುಚರಿತಾ ಎಂಬ ಯುವನಟಿ ಈ ಚಿತ್ರದ ಮೂಲಕ ನಾಯಕಿಯಾಗಿ ಸ್ಯಾಂಡಲ್ವುಡ್ಗೆ ಕಾಲಿಡುತ್ತಿದ್ದಾರೆ. ಶರತ್ ಲೋಹಿತಾಶ್ವ, ನೀನಾಸಂ ಅಶ್ವಥ್ ಮುಂತಾದವರು ಚಿತ್ರದಲ್ಲಿದ್ದಾರೆ.

ವೈಟ್ ಲೋಟಸ್ ಎಂಟರ್ಟೈನ್ಮೆಂಟ್ ಮತ್ತು ಶ್ರೀ ಓಂ ಸಿನಿ ಎಂಟ್ರಟೈನರ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜಿಸಿದ್ದು, ಸೆಲ್ಪಂ ಜಾನ್ ಛಾಯಾಚಿತ್ರಗ್ರಹಣ ಮಾಡಿದ್ದಾರೆ. ಎನ್.ಎಂ ವಿಶ್ವ ಸಂಕಲನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.