ಬಿಗ್ ಬಾಸ್ ಮೂಲಕ ಹೆಸರಾದ ದಿವ್ಯಾ ಉರುಡುಗ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಅರವಿಂದ್ ಕೌಶಿಕ್ ನಿರ್ದೇಶನದ ʻ ಅರ್ದಂಬರ್ಧ ಪ್ರೇಮ ಕಥೆʼ ಚಿತ್ರ ಸೆಟ್ಟೇರಿದೆ. ಆದರೆ ಈ ವರೆಗೂ ಈ ಚಿತ್ರದ ನಾಯಕ ನಟ ಯಾರು ಎಂದು ಗೊತ್ತಾಗಿಲ್ಲ.

ನಿರ್ದೇಶಕ ಅರವಿಂದ್ ಕೌಶಿಕ್ ಅದಾಗಲೇ ಟೀಸರ್ ಒಂದನ್ನು ಅನಾವರಣ ಮಾಡಿದ್ದಾರೆ. ಅದರಲ್ಲಿ ಕೂಡಾ ಹೀರೋ ಯಾರು ಎನ್ನುವ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಯನ್ನಷ್ಟೇ ಉಳಿಸಿದ್ದಾರೆ. ವಿಜಯದಶಮಿಯ ದಿನ ಹೀರೋ ಪರಿಚಯದ ಟೀಸರ್ ಬಿಡುಗಡೆ ಮಾಡಲಿದ್ದಾರಂತೆ.

ʻ ಅರ್ದಂಬರ್ಧ ಪ್ರೇಮ ಕಥೆʼಗೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.

ಬಕ್ಸಸ್ ಮೀಡಿಯಾ ʻಅರ್ದಂಬರ್ಧ ಪ್ರೇಮ ಕಥೆʼ ಚಿತ್ರವನ್ನು ನಿರ್ಮಿಸಿದೆ. ಲೈಟ್ ಹೌಸ್ ಮೀಡಿಯಾ ಮತ್ತು ಆರ್ಎಸಿ ವಿಷುವಲ್ಸ್ ಕೂಡಾ ನಿರ್ಮಾಣದಲ್ಲಿ ಕೈಜೋಡಿಸಿವೆ. ಸೂರ್ಯ ಛಾಯಾಗ್ರಹಣ, ಸಂತೋಷ್ ರಾಧಾಕೃಷ್ಣನ್ ಶೀರ್ಷಿಕೆ ವಿನ್ಯಾಸದ ಜೊತೆಗೆ ಗ್ರಾಫಿಕ್ಸ್ ತಂತ್ರಜ್ಞಾನದ ಕೆಲಸವನ್ನೂ ನಿಭಾಯಿಸಿದ್ದಾರೆ. ರ್ಯಾಪರ್ ಆಲ್ ಓಕೆ ಅಲೋಕ್ ಬಾಬು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ನಿರೂಪಕಿಯಾಗಿ ಹೆಸರು ಮಾಡಿರುವ ಶ್ರೇಯಾ ಬಾಬು, ವೆಂಕಟ್ ಶಾಸ್ತ್ರಿ, ಪ್ರದೀಪ್ ರೋಷನ್, ಸೂರಜ್ ಹೂಗಾರ್, ಸುಜಿತ್ ಶೆಟ್ಟಿ ಮೊದಲಾದವರ ತಾರಾಗಣ ಈ ಚಿತ್ರಕ್ಕಿದೆ. ಇದಲ್ಲದೇ ಹಲವು ವರ್ಷಗಳಿಂದ ಚಿತ್ರರಂಗದಿಂದ ದೂರವೇ ಉಳಿದಿದ್ದ ನಟರೊಬ್ಬರು ಈ ಚಿತ್ರದಲ್ಲಿದ್ದಾರಂತೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.