ಬೆಂಗಳೂರು: ನಟ ‘ಡಾಲಿ’ ಧನಂಜಯ್ ಅಭಿನಯದ ‘ಹೆಡ್ ಬುಷ್’ ಸಿನಿಮಾ ದೀಪಾವಳಿಗೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಅಗ್ನಿ ಶ್ರೀಧರ್ ಅವರ ಆತ್ಮಕಥೆ ‘ದಾದಾಗಿರಿಯ ಆ ದಿನಗಳು’ ಕೃತಿಯನ್ನು ಆಧರಿಸಿ ನಿರ್ಮಾಣಗೊಳ್ಳುತ್ತಿರುವ, ‘ಹೆಡ್ಬುಷ್–ದಿ ರೈಸ್ ಆ್ಯಂಡ್ ರೈಸ್ ಆಫ್ ಬೆಂಗಳೂರು ಅಂಡರ್ವರ್ಲ್ಡ್’ ಸಿನಿಮಾ ಅಕ್ಟೋಬರ್ 21ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿದೆ.

ಭೂಗತ ದೊರೆ ಎಂ.ಪಿ ಜಯರಾಜ್ ಪಾತ್ರಕ್ಕೆ ನಟ ‘ಡಾಲಿ’ ಧನಂಜಯ್ ಸಿನಿಮಾದಲ್ಲಿ ಬಣ್ಣಹಚ್ಚಿದ್ದಾರೆ.ಚಿತ್ರವನ್ನು ಶೂನ್ಯ ನಿರ್ದೇಶಿಸಿದ್ದಾರೆ. ಚಿತ್ರದ ಬಿಡುಗಡೆ ಬಗ್ಗೆ ನಟ ಧನಂಜಯ್ ಕೂಡ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಭೂಗತ ದೊರೆ ಎಂ.ಪಿ.ಜಯರಾಜ್ ಜೀವನಾಧಾರಿತ ಹೆಡ್ಬುಷ್ ಚಿತ್ರಕ್ಕೆ ಅಗ್ನಿ ಶ್ರೀಧರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

1970ರ ಬೆಂಗಳೂರಿನ ಭೂಗತ ಜಗತ್ತನ್ನು ಚಿತ್ರದಲ್ಲಿ ತೋರಿಸಲಾಗಿದೆ. ‘ಡಾಲಿ’ ಧನಂಜಯ, ಪಾಯಲ್ ರಜಪೂತ್, ಕ್ರೇಜಿಸ್ಟಾರ್ ರವಿಚಂದ್ರ, ‘ಲೂಸ್ ಮಾದ’ ಯೋಗಿ, ವಸಿಷ್ಠ ಎನ್ ಸಿಂಹ, ಡೈನಾಮಿಕ್ ಸ್ಟಾರ್ ದೇವರಾಜ್, ಶೃತಿ ಹರಿಹರನ್, ರಘು ಮುಖರ್ಜಿ, ಬಾಲು ನಾಗೇಂದ್ರ ಹೀಗೆ ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ.

ಡಾಲಿ ಪಿಕ್ಚರ್ಸ್ ಹಾಗೂ ಸೋಮಣ್ಣ ಟಾಕೀಸ್ ಲಾಂಛನದಲ್ಲಿ ಡಾಲಿ ಧನಂಜಯ ಹಾಗೂ ರಾಮ್ಕೊ ಸೋಮಣ್ಣ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ:'ಸ್ತನಗಳ ಗಾತ್ರ ಹೆಚ್ಚಿಸಿಕೊಳ್ಳಿ':ಮುಜುಗರದ ಅನುಭವಗಳನ್ನು ತೋಡಿಕೊಂಡ ನಟಿ ರಾಧಿಕಾ

ಚಿತ್ರ ಬಿಡುಗಡೆಗೆ ತಡೆ ಕೋರಿ ಎಂ.ಪಿ ಜಯರಾಜ್ ಪುತ್ರ ಅಜಿತ್ ಜಯರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಈ ಬೆನ್ನಲೇ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಪ್ರಕಟಿಸಿದೆ.

ಇದನ್ನೂ ಓದಿ:ಖ್ಯಾತ ಫ್ಯಾಷನ್ ಡಿಸೈನರ್ ಪ್ರತ್ಯುಶಾ ಅನುಮಾನಾಸ್ಪದ ಸಾವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.