2021ರಲ್ಲಿ ಶೂಟಿಂಗ್ ಆರಂಭಿಸಿದ್ದ ಧ್ರುವ ಸರ್ಜಾ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಮಾರ್ಟಿನ್’ಗೆ ಇನ್ನೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಈ ಬಗ್ಗೆ ಇತ್ತೀಚೆಗೆ ಚಿತ್ರದ ನಿರ್ದೇಶಕ ಎ.ಪಿ. ಅರ್ಜುನ್ ಅವರನ್ನು ಪತ್ರಕರ್ತರು ಪ್ರಶ್ನಿಸಿದಾಗ, ಅವರು ಕಾರಣಗಳ ಪಟ್ಟಿ ಬಿಚ್ಚಿಟ್ಟರು.

‘ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ. ಸದ್ಯ ರಿರೆಕಾರ್ಡಿಂಗ್ ಆಗುತ್ತಿದೆ. ಸಿಜಿ(ಗ್ರಾಫಿಕ್ಸ್) ಕೆಲಸಗಳು ನಡೆಯುತ್ತಿವೆ. ಈ ಸಿನಿಮಾ ಏಕೆ ತಡವಾಗುತ್ತಿದೆ ಎಂದರೆ, ಸಿನಿಮಾದಲ್ಲಿ ಸಿಜಿ ಕೆಲಸ ಹೆಚ್ಚು ಇದೆ. ಸಿನಿಮಾದ ಒಟ್ಟು ಅವಧಿಯಲ್ಲಿ ಸುಮಾರು ಎರಡು ಗಂಟೆ ಸಿಜಿಯೇ ಇದೆ. ಅದು ಪೂರ್ಣಗೊಳ್ಳದೆ ಬಿಡುಗಡೆ ದಿನಾಂಕ ಘೋಷಣೆ ಮಾಡಲು ಸಾಧ್ಯವೇ ಇಲ್ಲ. ನಾನು, ನಿರ್ಮಾಪಕರು ಜೊತೆಗೂಡಿ ರಿಲೀಸ್ ದಿನಾಂಕವನ್ನು ಆದಷ್ಟು ಬೇಗ ತಿಳಿಸುತ್ತೇವೆ. ಈ ವರ್ಷದಲ್ಲೇ ಸಿನಿಮಾ ತೋರಿಸುತ್ತೇವೆ’ ಎಂದಿದ್ದಾರೆ ಅರ್ಜುನ್.

‘ಮಾರ್ಟಿನ್’ ಚಿತ್ರಕ್ಕೆ ಖ್ಯಾತ ಬಹುಭಾಷಾ ನಟ ಅರ್ಜುನ್ ಸರ್ಜಾ ಕಥೆ ಬರೆದಿದ್ದಾರೆ. ವಾಸವಿ ಎಂಟರ್ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ. ಮೆಹ್ತಾ ಈ ಚಿತ್ರ ನಿರ್ಮಿಸಿದ್ದಾರೆ. ಮಣಿ ಶರ್ಮ ಅವರ ಸಂಗೀತ ನಿರ್ದೇಶನದಲ್ಲಿ ಚಿತ್ರದ ಹಾಡುಗಳು ಮೂಡಿಬಂದಿದ್ದು, ರವಿ ಬಸ್ರೂರ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಸತ್ಯ ಹೆಗಡೆ ಛಾಯಾಚಿತ್ರಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಚಿತ್ರದ ತಾರಾಬಳಗದಲ್ಲಿ ವೈಭವಿ ಶಾಂಡಿಲ್ಯ, ಅನ್ವೇಶಿ ಜೈನ್, ಜಾರ್ಜಿಯ ಆಂಡ್ರಿಯಾನಿ, ಚಿಕ್ಕಣ್ಣ, ಮಾಳವಿಕ ಅವಿನಾಶ್, ನಿಕ್ತಿನ್ ಧೀರ್, ನವಾಬ್ ಶಾ, ರೋಹಿತ್ ಪಾಠಕ್ ಮುಂತಾದವರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.