ಪ್ರೇಮ್ ನಿರ್ದೇಶನದ ‘ಏಕ್ ಲವ್ಯಾ’ ಚಿತ್ರ ವಿಡಿಯೋ ಹಾಡನ್ನು ನಾಲ್ಕು ಭಾಷೆಗಳಲ್ಲಿ ಚಿತ್ರತಂಡ ಬಿಡುಗಡೆ ಮಾಡಿದೆ. ಕನ್ನಡ, ತೆಲುಗು, ತಮಿಳು ಮತ್ತು ಮಲೆಯಾಳಂನಲ್ಲಿ ಈ ಹಾಡು ಬಿಡುಗಡೆ ಆಗಿದೆ.

ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತವಿದೆ. ಅರ್ಮಾನ್ ಮಲ್ಲಿಕ್ ಹಾಡಿದ್ದಾರೆ. ಎ2 ಮ್ಯೂಸಿಕ್ ಆಡಿಯೋ ಸಂಸ್ಥೆ ನಿರ್ಮಾಣ ಮಾಡಿದೆ. ಪ್ರೇಮ್ ಅವರೇ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ರೀಷ್ಮಾ ನಾನಯ್ಯ ಮತ್ತು ರಾಣಾ ಮತ್ತು ರಚಿತಾರಾಮ್ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.ಯೂರೋಪ್, ಲಡಾಕ್, ಲೇಹ್ನಂತಹ ಸುಂದರ ತಾಣಗಳಲ್ಲಿ ಹಾಡಿನ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ಪ್ರೇಮಿಗಳ ದಿನದಂದೇ ನಾಲ್ಕು ಭಾಷೆಗಳಲ್ಲಿ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರಪ್ರೇಮಿಗಳಿಗೆ ಚಿತ್ರತಂಡ ಖುಷಿ ಕೊಟ್ಟಿದೆ. ಹಾಡು ಬಿಡುಗಡೆಯಾದಂದೇ ಅದನ್ನು 1 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

ಯುವ ಜೋಡಿಯ ಪ್ರೇಮ ಕಥೆಯ ವಸ್ತು ‘ಏಕ್ ಲವ್ಯಾ’ ಚಿತ್ರದ್ದು. ರಕ್ಷಿತಾ ಪ್ರೇಂ ಚಿತ್ರ ನಿರ್ಮಿಸುತ್ತಿದ್ದಾರೆ. ಅಂದ ಹಾಗೆ ಇದು ರಾಣಾ ಅವರ ಮೊದಲ ಚಿತ್ರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.