ಹೋಶಿಯಾರ್‌ಪುರ (ಪಂಜಾಬ್): ಕೇಂದ್ರದ ಕೃಷಿ ಕಾನೂನುಗಳನ್ನು ರದ್ದುಪಡಿಸುವವರೆಗೂ ಅಕ್ಷಯ್ ಕುಮಾರ್ ಅಭಿನಯದ 'ಸೂರ್ಯವಂಶಿ' ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಭಾರತಿ ಕಿಸಾನ್ ಯೂನಿಯನ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದ್ದಾರೆ.

ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡದ ನಟ ಅಕ್ಷಯ್ ಕುಮಾರ್ ಅವರನ್ನು ವಿರೋಧಿಸುತ್ತಿದ್ದೇವೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರಮಂದಿರಗಳ ಹೊರಗೆ ಹಾಕಲಾಗಿದ್ದ ಸಿನೆಮಾ ಪೋಸ್ಟರ್‌ಗಳನ್ನು ಪ್ರತಿಭಟನಾಕಾರರು ಹರಿದು ಹಾಕಿದ್ದಾರೆ.

ಅಕ್ಷಯ್ ಕುಮಾರ್, ರಣವೀರ್ ಸಿಂಗ್, ಅಜಯ್ ದೇವಗನ್ ಹಾಗೂ ಕತ್ರಿನಾ ಕೈಪ್ ಅಭಿಯನಯದ ಸೂರ್ಯವಂಶಿ ಚಿತ್ರವನ್ನು ರೋಹಿತ್ ಶೆಟ್ಟಿ ನಿರ್ದೇಶಿಸಿದ್ದಾರೆ.

ನವೆಂಬರ್ 5 ರಂದು (ಶುಕ್ರವಾರ) ಬಿಡುಗಡೆಯಾಗಿದ್ದು, ಮೊದಲ ದಿನವೇ ₹26 ಕೋಟಿ ಗಳಿಸಿದೆ. ಅಕ್ಷಯ್ ಕುಮಾರ್ ಅವರ ಮಿಷನ್ ಮಂಗಲ್ ಸಿನಿಮಾ ಹೊರತುಪಡಿಸಿದರೆ ಒಂದು ದಿನದಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಸಿನಿಮಾ ಇದಾಗಿದೆ.

’ಸೂರ್ಯವಂಶಿ’ ಚಿತ್ರವು ಮುಂಬೈನಲ್ಲಿ 1993, 2002, 2006 ಮತ್ತು 2008ರಲ್ಲಿ ನಡೆದ ಸರಣಿ ಉಗ್ರರ ದಾಳಿಗಳ ಘಟನೆ ಆಧಾರಿತ ಸಿನಿಮಾ. ಸೂರ್ಯವಂಶಿ ಚಿತ್ರವನ್ನು ಕರಣ್ ಜೋಹರ್ ಮತ್ತು ರೋಹಿತ್ ಶೆಟ್ಟಿ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ಬಿಡುಗಡೆಯನ್ನು ಕೋವಿಡ್ ಕಾರಣಕ್ಕೆ 2 ಸಲ ಮುಂದೂಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.