‘ಆರ್.ಸಿ. ಸ್ಟುಡಿಯೊಸ್’ ಬ್ಯಾನರ್ನಲ್ಲಿ ನಿರ್ದೇಶಕ ಆರ್.ಚಂದ್ರು ನಿರ್ಮಾಣ ಮಾಡುತ್ತಿರುವ, ರಾಜ್ ಮೋಹನ್ ನಿರ್ದೇಶನದ ‘ಫಾದರ್’ ಸಿನಿಮಾದ ಚಿತ್ರೀಕರಣ ಅಂತಿಮ ಹಂತ ತಲುಪಿದ್ದು, ಆ್ಯಕ್ಷನ್ ದೃಶ್ಯಗಳ ಚಿತ್ರೀಕರಣಕ್ಕೆ ವಾರಾಣಸಿಯತ್ತ ಚಿತ್ರತಂಡ ಹೊರಡಲಿದೆ.

ಶಿವರಾಜ್ಕುಮಾರ್ ನಟನೆಯ ‘ಬೈರಾಗಿ’ ಸಿನಿಮಾದಲ್ಲಿ ಸಹ ನಿರ್ದೇಶಕರಾಗಿ ರಾಜ್ ಮೋಹನ್ ಕಾರ್ಯನಿರ್ವಹಿಸಿದ್ದರು. ತಂದೆ-ಮಗನ ಬಾಂಧವ್ಯ ಸಾರುವ ‘ಫಾದರ್’ ಸಿನಿಮಾದಲ್ಲಿ ‘ಲವ್ ಮಾಕ್ಟೇಲ್’ ಖ್ಯಾತಿಯ ಡಾರ್ಲಿಂಗ್ ಕೃಷ್ಣ ಹಾಗೂ ಬಹುಭಾಷಾ ನಟ ಪ್ರಕಾಶ್ ರಾಜ್ ಮುಖ್ಯಭೂಮಿಕೆಯಲ್ಲಿದ್ದಾರೆ. ಕೃಷ್ಣನಿಗೆ ಅಮೃತಾ ಅಯ್ಯಂಗಾರ್ ಜೋಡಿಯಾಗಿದ್ದಾರೆ. ತೆಲುಗಿನ ಖ್ಯಾತ ನಟ ಸುನೀಲ್ ಸೇರಿದಂತೆ ಅನೇಕ ಪರಭಾಷೆ ನಟ, ನಟಿಯರ ದಂಡೇ ಈ ಚಿತ್ರದಲ್ಲಿದೆ. ಚಿತ್ರದ ಕೊನೆಯ ಹಂತದ ಶೂಟಿಂಗ್ ಬನ್ನೇರುಘಟ್ಟದಲ್ಲಿರುವ ಐತಿಹಾಸಿಕ ದೇವಾಲಯ ಶ್ರೀ ಚಂಪಕಧಾಮಸ್ವಾಮಿ ದೇವಾಲಯದಲ್ಲಿ ನಡೆಯಿತು. ಇಲ್ಲಿ ನೂರಾರು ಜನ ಜೂನಿಯರ್ ಆರ್ಟಿಸ್ಟ್ ಸಮ್ಮುಖದಲ್ಲಿ ಚಿತ್ರದ ಸಾಹಸ ದೃಶ್ಯಗಳನ್ನು ಸೆರೆಹಿಡಿಯಲಾಯಿತು. ವಿನೋದ್ ಮಾಸ್ಟರ್ ಸಾಹಸ ನಿರ್ದೇಶನದಲ್ಲಿ ದೃಶ್ಯಗಳು ಸೆರೆಯಾದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.