ಅನಂತ ನಾಗ್, ಲಕ್ಷ್ಮಿ ಜೋಡಿಯ ‘ನಾ ನಿನ್ನ ಬಿಡಲಾರೆ’ ಚಿತ್ರ ಬಹಳ ಜನಪ್ರಿಯತೆ ಗಳಿಸಿತ್ತು. ಇದೀಗ ಅದೇ ಶೀರ್ಷಿಕೆಯ ಸಿನಿಮಾವೊಂದು ತೆರೆಗೆ ಬರಲು ಸಜ್ಜಾಗಿದೆ. ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ ನವೆಂಬರ್ 29ಕ್ಕೆ ಬಿಡುಗಡೆಗೊಳ್ಳುತ್ತಿದೆ. ಬಹುತೇಕ ಹೊಸಬರಿಂದಲೇ ಕೂಡಿರುವ ಚಿತ್ರಕ್ಕೆ ನವೀನ್ ಜಿ.ಎಸ್ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಕಮಲ ಉಮಾ ಭಾರತಿ ಪ್ರೊಡಕ್ಷನ್ಸ್ ಅಡಿಯಲ್ಲಿ ಅಂಬಾಲಿ ಭಾರತಿ ಚಿತ್ರವನ್ನು ನಿರ್ಮಿಸಿರುವುದರ ಜೊತೆಗೆ ನಾಯಕಿಯಾಗಿಯೂ ಕಾಣಿಸಿಕೊಂಡಿದ್ದಾರೆ. ‘ಈ ಚಿತ್ರವನ್ನು ಆರಂಭಿಸಲು ನಾನು ಬಹಳಷ್ಟು ಪೂರ್ವ ತಯಾರಿಯನ್ನ ಮಾಡಿಕೊಂಡಿದ್ದೆ. ಸೈಕಲಾಜಿಕಲ್, ಹಾರರ್, ಥ್ರಿಲಿಂಗ್, ಸಸ್ಪೆನ್ಸ್ ಚಿತ್ರ. ವೈದ್ಯಕೀಯ ಸಂಗತಿಗಳನ್ನು ಚಿತ್ರದಲ್ಲಿ ಹೇಳಲಾಗಿದೆ’ ಎಂದಿದ್ದಾರೆ ನಿರ್ದೇಶಕರು.

ವೀರೇಶ್ ಎಸ್.ಛಾಯಾಚಿತ್ರಗ್ರಹಣ, ಎಮ್.ಎಸ್.ತ್ಯಾಗರಾಜು ಸಂಗೀತ, ದೀಪಕ್ ಜಿ.ಎಸ್ ಸಂಕಲನವಿದೆ. ಪಂಚಿ, ಸೀರುಂಡೆ ರಘು,ಕೆ.ಸ್.ಶ್ರೀಧರ್ ಮುಂತಾದವರು ಚಿತ್ರದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.