ಈ ಹಿಂದೆ ವಿಜಯ ರಾಘವೇಂದ್ರ ನಟನೆಯ ‘ಓ ಮನಸೇ’ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ದೇಶಿಸಿದ್ದ ಡಿ.ಜಿ. ಉಮೇಶ್ ಗೌಡ ಅವರೀಗ ಮತ್ತೊಂದು ಚಿತ್ರಕ್ಕೆ ಕೈ ಹಾಕಿದ್ದಾರೆ. ಲವ್, ಆ್ಯಕ್ಷನ್ ಕಥೆಯುಳ್ಳ ಈ ಚಿತ್ರದ ನಾಯಕನಾಗಿ ಸಂತೋಷ್ ಕಾಣಿಸಿಕೊಳ್ಳಲಿದ್ದಾರೆ. ನಾಯಕಿಯಾಗಿ ಅನುಷಾ ರೈ ನಟಿಸುತ್ತಿದ್ದಾರೆ. ಶ್ರೀ ಸ್ನೇಹ ಕಂಬೈನ್ಸ ಬ್ಯಾನರ್ ಅಡಿ ಶೇಖರ್ ನಾ ಕಾಲೇರಿ ಬಂಡವಾಳ ಹೂಡಲಿದ್ದಾರೆ.

‘ಶೀಘ್ರದಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಬೆಳಗಾವಿ, ಬೆಂಗಳೂರು ಸುತ್ತಮುತ್ತ 50 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ. ಚಿತ್ರದಲ್ಲಿ 5 ಹಾಡುಗಳಿದ್ದು ಕೇರಳ, ಮಂಗಳೂರು, ಸಕಲೇಶಪುರ, ಚಿಕ್ಕಮಗಳೂರಿನಲ್ಲಿ ಚಿತ್ರೀಕರಿಸುವ ಯೋಜನೆ ಹಾಕಿಕೊಳ್ಳಲಾಗಿದೆ’ ಎಂದಿದ್ದಾರೆ ನಿರ್ದೇಶಕರು.

ಶೋಭರಾಜ್, ಸುಚೇಂದ್ರ ಪ್ರಸಾದ್, ಸಾಧು ಕೋಕಿಲ, ಅಭಿಜಿತ್, ಶಂಕರ್ ಅಶ್ವಥ್, ದಿವ್ಯಾ ಗೌಡ ಮುಂತಾದವರು ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಡಿ.ಜಿ.ಉಮೇಶ್ ಗೌಡ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಬಾಬುರಾಜ್ ಛಾಯಾಚಿತ್ರಗ್ರಹಣ, ಮಳವಳ್ಳಿ ಸಾಯಿಕೃಷ್ಣ ಅವರ ಸಂಭಾಷಣೆ, ಸೂರಜ್ ಸಂಗೀತವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.