ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಇದು ‘ಮೃದುಲ’ನ ಹಾಡು

Published 21 ಜುಲೈ 2024, 17:12 IST
Last Updated 21 ಜುಲೈ 2024, 17:12 IST
ಅಕ್ಷರ ಗಾತ್ರ

ಹೊಸಬರೇ ಸೇರಿಕೊಂಡು ಸಿದ್ಧಪಡಿಸಿರುವ ‘ಲೈಫ್ ಆಫ್ ಮೃದುಲ’ ಚಿತ್ರದ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಮದನ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಮದನ್‌ಕುಮಾರ್.ಸಿ ಚಿತ್ರವನ್ನು ನಿರ್ಮಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಚೇತನ್ ತ್ರಿವೇಣ್ ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ

‘ಮೃದುಲಾಳ ಜೀವನದಲ್ಲಿ ಎದುರಾಗುವ ಮೂರು ವಿಭಿನ್ನ ಕಾಲ ಘಟ್ಟಗಳನ್ನು ಚಿತ್ರದಲ್ಲಿ ಹೇಳಲಾಗಿದೆ. ಆಕೆಗೆ ಬದುಕಲ್ಲಿ ಅನಿರೀಕ್ಷಿತವಾಗಿ ಬರುವ ಸವಾಲನ್ನು ಯಾವ ರೀತಿ ಎದುರಿಸುತ್ತಾಳೆ ಎಂಬುದನ್ನು ಕುತೂಹಲ ತಿರುವುಗಳ ಮೂಲಕ ಥ್ರಿಲ್ಲರ್ ರೂಪದಲ್ಲಿ ತೋರಿಸಲಾಗಿದೆ’ ಎಂದರು ನಿರ್ದೇಶಕರು.

ಪೂಜಾ ಲೋಕಾಪುರ ಚಿತ್ರದ ನಾಯಕಿ. ಆಶಾಸುಜಯ್, ಶಶಾಂಕ್, ಕುಲದೀಪ್, ಯೋಗಿದೇವಗಂಗೆ ಮುಂತಾದವರು ನಟಿಸಿದ್ದಾರೆ. ರಾಹುಲ್.ಎಸ್.ವಾಸ್ತರ್ ಸಂಗೀತ, ಅಚ್ಚುಸುರೇಶ್‌ ಛಾಯಾಚಿತ್ರಗ್ರಹಣ, ವಸಂತಕುಮಾರ್.ಕೆ ಸಂಕಲನ ಚಿತ್ರಕ್ಕಿದೆ. ಬೆಂಗಳೂರು, ಕುಂದಾಪುರ ಮೊದಲಾದೆಡೆ ಚಿತ್ರೀಕರಣಗೊಂಡಿದೆ. ಚಿತ್ರವನ್ನು ಆಗಸ್ಟ್ ತಿಂಗಳಲ್ಲಿ ತೆರೆಗೆ ತರಲು ತಂಡ ಸಿದ್ಧತೆ ನಡೆಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT