ಈಗಾಗಲೇ ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಸದ್ದು ಮಾಡಿರುವ ‘ಕೆಂಡ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಸಹದೇವ್ ಕೆಲವಡಿ ನಿರ್ದೇಶಿಸಿ, ರೂಪಾ ರಾವ್ ನಿರ್ಮಿಸಿರುವ ಚಿತ್ರ ಜು.26ರಂದು ತೆರೆಗೆ ಬರಲಿದೆ.

‘ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುವ ಯುವಕನೋರ್ವ ಪರಿಸ್ಥಿತಿಗಳ ಸೆಳವಿಗೆ ಸಿಕ್ಕು ಭೂಗತ ಲೋಕದ ತೆಕ್ಕೆಗೆ ಬೀಳುವ ಕಥೆ ಇಲ್ಲಿದೆ. ಹಾಗಂತ ಇದು ಸಿದ್ಧ ಸೂತ್ರಗಳ ಸುತ್ತ ಗಿರಕಿ ಹೊಡೆಯುವ ಕಥೆಯಲ್ಲ. ಕೈಗೆ, ಮೈ ಮನಸಿಗೆ ಮೆತ್ತಿಕೊಂಡ ರಕ್ತದ ಕಲೆಗಳನ್ನ ಕಲಾತ್ಮಕವಾಗಿ ತೋರಿಸಲು ಯತ್ನಿಸಿದ್ದೇವೆ. ಸುಡುವ ಕ್ರೌರ್ಯವನ್ನು ಸೂಕ್ಷ್ಮ ಸಂವೇದನೆಯ ಒಳಗಣ್ಣಿನಿಂದ ನೋಡಲು ಸಾಧ್ಯವೇ ಎಂಬ ಆಲೋಚನೆ ಚಿತ್ರದಲ್ಲಿ ಕಾಣುತ್ತದೆ’ ಎಂದರು ನಿರ್ದೇಶಕರು.

ಅಮೇಯುಕ್ತಿ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ರೂಪಾ ರಾವ್ ನಿರ್ಮಾಣ ಮಾಡಿದ್ದಾರೆ. ರಿತ್ವಿಕ್ ಕಾಯ್ಕಿಣಿ ಸಂಗೀತ ನಿರ್ದೇಶನ, ಪ್ರದೀಪ್ ನಾಯಕ್ ಸಂಕಲನ, ಲಕ್ಷ್ಮಿಕಾಂತ್ ಜೋಶಿ ಕಲಾ ನಿರ್ದೇಶನವಿರುವ ಈ ಚಿತ್ರದಲ್ಲಿ ಬಿ.ವಿ ಭರತ್, ಪ್ರಣವ್ ಶ್ರೀಧರ್, ವಿನೋದ್ ಸುಶೀಲ, ಗೋಪಾಲಕೃಷ್ಣ ದೇಶಪಾಂಡೆ, ಸಚಿನ್ ಶ್ರೀನಾಥ್, ಬಿಂದು ರಕ್ಷಿದಿ ಮುಂತಾದವರ ತಾರಾಗಣವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.