ನಿರ್ದೇಶಕ ನಾಗಶೇಖರ್ ಕೆಲ ದಿನಗಳ ಹಿಂದೆ ‘ಸಂಜು ವೆಡ್ಸ್ ಗೀತಾ–2’ ಚಿತ್ರಕ್ಕೆ ಚಾಲನೆ ನೀಡಿದ್ದರು. ಇದೀಗ ಚಿತ್ರದ ಡಬ್ಬಿಂಗ್ ಪ್ರಾರಂಭಿಸಿದ್ದಾರೆ.

‘ಮೂರು ಹಂತಗಳ ಚಿತ್ರೀಕರಣ ಹಾಗೂ ಎಡಿಟಿಂಗ್ ಮುಗಿದಿದೆ. ಬೆಂಗಳೂರಿನಲ್ಲಿ ಮೊದಲ ಹಂತದ ಶೂಟಿಂಗ್ ಮುಗಿಸಿ, ನಂತರ ಸ್ವಿಡ್ಜರ್ಲೆಂಡ್‌ನಲ್ಲಿ 15 ದಿನ ಹನ್ನೊಂದು ಜಾಗಗಳಲ್ಲಿ ಚಿತ್ರೀಕರಣ ಮಾಡಿದೆವು. ಶಿಡ್ಲಘಟ್ಟದ ರೇಷ್ಮೆಗೆ ದೊಡ್ಡ ಮಾರುಕಟ್ಟೆ ಇದೆ. ನಮ್ಮ ರೇಷ್ಮೆ ನೂಲಿಗೆ ಒಳ್ಳೆ ಬೆಲೆ ಬೇಕು ಅಂತ ಹೋರಾಡುವ ಇಬ್ಬರು ಪ್ರೇಮಿಗಳ ಕಥೆ ಈ ಚಿತ್ರದಲ್ಲಿದೆ. ನಮ್ಮ ಮಣ್ಣಿನ ಹೋರಾಟದ ಕಥೆ ಹೇಳಬೇಕೆಂದು ಈ ಸಿನಿಮಾ ಮಾಡಿದ್ದೇನೆ. ನಮ್ಮ ಚಿತ್ರದಲ್ಲಿ ಹಾಡುಗಳೇ ಹೈಲೈಟ್. ಹಾಡು ಕೇಳಿದವರೆಲ್ಲ ಮೆಚ್ಚಿಕೊಂಡಿದ್ದಾರೆ’ ಎಂದರು ನಿರ್ದೇಶಕ ನಾಗಶೇಖರ್.

ಶ್ರೀನಗರ ಕಿಟ್ಟಿಗೆ ರಚಿತಾ ರಾಮ್ ಜೋಡಿಯಾಗಿದ್ದಾರೆ. ‘ಚಿತ್ರದಲ್ಲಿ ಮಾತುಗಳಿಗೆ ತುಂಬಾ ಪ್ರಾಮುಖ್ಯ ಇರುವುದರಿಂದ ಸ್ವಲ್ಪ ಮುಂಚೆಯೇ ಡಬ್ಬಿಂಗ್ ಶುರು ಮಾಡುತ್ತಿದ್ದೇವೆ’ ಎಂದು ಶ್ರೀನಗರ ಕಿಟ್ಟಿ ಹೇಳಿದರು.

ಮಹಾನಂದಿ ಕ್ರಿಯೇಶನ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಾಗಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಸಂಗೀತ ನಿರ್ದೇಶಕ ಶ್ರೀಧರ ವಿ. ಸಂಭ್ರಮ ಐದು ಹಾಡುಗಳಿಗೆ ಸಂಗೀತ ನೀಡಿದ್ದು, ಸೋನು ನಿಗಂ, ಶ್ರೇಯಾ ಘೋಷಾಲ್, ಮಂಗ್ಲಿ ಹಾಡಿದ್ದಾರೆ. ರಾಗಿಣಿ, ಚೇತನ್ ಚಂದ್ರ, ರಂಗಾಯಣ ರಘು, ಸಾಧು ಕೋಕಿಲ ವಿಶೇಷ ಪಾತ್ರಗಳಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.