ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಇಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅವಕಾಶ ಮಾಡಿಕೊಟ್ಟಿದ್ದು, ಚಿತ್ರರಂಗದ ಗಣ್ಯರು ಸೇರಿದಂತೆ ಅಭಿಮಾನಿಗಳು ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಶುಕ್ರವಾರ ಸಂಜೆ ನೆಲಮಂಗಲದ ಆಸ್ಪತ್ರೆಯಲ್ಲಿ ಲೀಲಾವತಿ ಅವರು ಕೊನೆಯುಸಿರೆಳೆದಿದ್ದು, ಇಂದು ಬೆಳಿಗ್ಗೆ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. 10.30ರ ಸುಮಾರಿಗೆ ಆಂಬುಲೆನ್ಸ್ ಮೂಲಕ ಪಾರ್ಥಿವ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರಕ್ಕೆ ಸಾಗಿಸಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ನಟ ದ್ವಾರಕೀಶ್, ಹಿರಿಯ ನಟಿಯರಾದ ಸುಧಾರಾಣಿ, ಮಾಳವಿಕಾ ಅವಿನಾಶ್ ಸೇರಿದಂತೆ ಹಲವರು ಅಂತಿಮ ದರ್ಶನ ಪಡೆದಿದ್ದಾರೆ.
.ಲೀಲಾವತಿ ಅಂತಿಮ ದರ್ಶನ: ಹಿರಿಯ ನಟಿ ನೆನೆದು ಅಭಿಮಾನಿಗಳ ಕಣ್ಣೀರು.Photos | ಹಿರಿಯ ನಟಿ ಲೀಲಾವತಿ ಅಂತಿಮ ದರ್ಶನದ ಕ್ಷಣಗಳು....

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.