ಬೆಂಗಳೂರು: ಕಂಠೀರವ ಕ್ರೀಡಾಂಗಣದಲ್ಲಿ ಇರಿಸಲಾದ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ರಾಜ್ಯದ ವಿವಿಧೆಡೆಯಿಂದ ಜನ ಸಾಗರವೇ ಹರಿದು ಬರುತ್ತಿದೆ.

ನೆಚ್ಚಿನ ನಟನನ್ನು ಕಳೆದುಕೊಂಡ ದುಃಖದಲ್ಲಿರುವ ಅಭಿಮಾನಿಗಳು, ಕ್ರೀಡಾಂಗಣದತ್ತ ಸಹಸ್ರಾರು ಸಂಖ್ಯೆಯಲ್ಲಿ ಬರುತ್ತಿದ್ದಾರೆ. ವಿವಿಧ ಜಿಲ್ಲೆಗಳಿಂದ ಇಲ್ಲಿಗೆ ಬಂದಿರುವವರು ಬೆಳಿಗ್ಗೆ 6 ಗಂಟೆಯಿಂದಲೆ ಸರತಿ ಸಾಲಿನಲ್ಲಿ ನಿಂತು, ದರ್ಶನ ಪಡೆದುಕೊಂಳ್ಳುತ್ತಿದ್ದಾರೆ. ಮಹಿಳೆಯರು, ಮಕ್ಕಳು ಕೂಡ ಅಂತಿಮ ದರ್ಶನಕ್ಕಾಗಿ ಸಾಲಿನಲ್ಲಿ ನಿಂತಿದ್ದಾರೆ.

ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದ್ದು, ಅಪ್ಪು ಅಪ್ಪು... ಎಂದು ಘೋಷಣೆ ಕೂಗುತ್ತಿದ್ದಾರೆ. ಇನ್ನೂ ಕೆಲವರು ಕಣ್ಣೀರು ಹಾಕುತ್ತಾ ಹೆಜ್ಜೆ ಹಾಕುತ್ತಿದ್ದಾರೆ. ದರ್ಶನ ಪಡೆಯಲು ಕೆಲವರು ಬ್ಯಾರಿಕೇಡ್‌ಗಳನ್ನು ಏರಿ, ಕ್ರೀಡಾಂಗಣ ಪ್ರವೇಶಿಸಲು ಮುಂದಾದ ಘಟನೆಯೂ ನಡೆಯಿತು.

ದೊಡ್ಡಣ್ಣ, ವನಿತಾ ವಾಸು, ಟಿ.ಎನ್. ಸೀತಾರಾಮ, ನಾಗೇಂದ್ರ ಪ್ರಸಾದ್, ರಾಜೇಶ್ ಕೃಷ್ಣನ್ ಸೇರಿದಂತೆ ಚಿತ್ರರಂಗದ ಪ್ರಮುಖರು ಬೆಳಿಗ್ಗೆಯೇ ಆಗಮಿಸಿ ದರ್ಶನ ಪಡೆದುಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.