ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: 4 ತಾಸು ನಟನ ಹೇಳಿಕೆ ದಾಖಲಿಸಿಕೊಂಡ ಪೊಲೀಸರು

Published 12 ಜೂನ್ 2024, 14:13 IST
Last Updated 12 ಜೂನ್ 2024, 14:13 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್ ನಟ ಸಲ್ಮಾನ್‌ ಖಾನ್‌ ನಿವಾಸದ ಎದುರು ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಸಲ್ಮಾನ್‌ ಅವರ ಹೇಳಿಕೆಯನ್ನು ಇಂದು (ಬುಧವಾರ) ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪರಾಧ ವಿಭಾಗದ ನಾಲ್ವರು ಅಧಿಕಾರಿಗಳು ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ಭೇಟಿ ನೀಡಿದ್ದಾರೆ. ಈ ವೇಳೆ ಸಲ್ಮಾನ್‌ ಹಾಗೂ ಅವರ ಸಹೋದರ ಅರ್ಬಾಜ್‌ ಖಾನ್‌ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ

ಸುಮಾರು 4 ಗಂಟೆಗಳ ಕಾಲ ಸಲ್ಮಾನ್‌ ಖಾನ್‌ ಅವರ ಹೇಳಿಕೆಯನ್ನು ಹಾಗೂ 2 ಗಂಟೆಗಳ ಕಾಲ ಅರ್ಬಾಜ್‌ ಖಾನ್‌ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದಿದ್ದಾರೆ.

ಈ ಘಟನೆಯ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ಕೈವಾಡವಿದೆ ಎನ್ನಲಾಗಿದೆ. ಈವರೆಗೂ 6 ಮಂದಿಯನ್ನು ಬಂಧಿಸಲಾಗಿದೆ. ಇದರಲ್ಲಿ ಒಬ್ಬ ಆರೋಪಿ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT