ಶಿವರಾಜ್ಕುಮಾರ್ ಅಭಿನಯದ ಹೊಸ ಚಿತ್ರ ‘ಘೋಸ್ಟ್’ನ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಶ್ರೀನಿ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಮೈಸೂರಿನಲ್ಲಿ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಮೂರನೇ ಹಂತದ ಚಿತ್ರೀಕರಣ ಫೆಬ್ರುವರಿಯಲ್ಲಿ ಆರಂಭವಾಗಲಿದೆ.

ನಿರ್ದೇಶಕ ಶ್ರೀನಿ ಅವರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಶಿವರಾಜಕುಮಾರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.