ಬೆಂಗಳೂರು: ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಚಿತ್ರದ ಪೋಸ್ಟರ್ ಮತ್ತಿತರ ಪ್ರಚಾರ ದಾಖಲೆಗಳಲ್ಲಿ ನಿರ್ದೇಶಕ ಎ.ಪಿ.ಅರ್ಜುನ್ ಫಿಲ್ಮ್ ಎಂಬ ಟ್ಯಾಗ್ಲೈನ್ ಬಳಕೆ ಮಾಡಬೇಕು ಹಾಗೂ ನಿರ್ದೇಶಕರನ್ನು ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನುಮತಿ ನೀಡಬೇಕು’ ಎಂದು ಹೈಕೋರ್ಟ್ ಚಿತ್ರ ನಿರ್ಮಾಪಕರಿಗೆ ಆದೇಶಿಸಿದೆ.

ಈ ಸಂಬಂಧ ನಿರ್ದೇಶಕ ಎ.ಪಿ.ಅರ್ಜುನ್ ಸಲ್ಲಿಸಿದ್ದ ವಾಣಿಜ್ಯ ಮೇಲ್ಮನವಿಯನ್ನು ರಜಾಕಾಲದ ವಿಭಾಗೀಯ ನ್ಯಾಯಪೀಠದ, ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಮತ್ತು ಎಂ.ಜಿ.ಉಮಾ ಅವರಿದ್ದ ಪೀಠವು ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜುನ್ ಪರ ಹಿರಿಯ ವಕೀಲ ಉದಯ್ ಹೊಳ್ಳ, ‘ಒಪ್ಪಂದದ ಪ್ರಕಾರ ಸಿನಿಮಾ ಬಿಡುಗಡೆಗೂ ಮುನ್ನ ಅರ್ಜಿದಾರರಿಗೆ ವೇತನ ಪಾವತಿಸಬೇಕು. ಪೋಸ್ಟರ್ ಮತ್ತು ಪ್ರಚಾರದ ದಾಖಲೆಗಳಲ್ಲಿ ಎ.ಪಿ.ಅರ್ಜುನ್ ಫಿಲ್ಮ್ ಎಂದು ನಮೂದಿಸಲು ನಿರ್ಮಾಪಕರಿಗೆ ನಿರ್ದೇಶಿಸಬೇಕು’ ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿವಾದಿ ಪರ ಹಿರಿಯ ವಕೀಲ ಸಿ.ಎಚ್.ಜಾಧವ್, ‘ಚಿತ್ರವು ಇದೇ 11ರಂದು ಒಟ್ಟು 3,800 ಚಿತ್ರ ಮಂದಿರಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ಈ ಹಂತದಲ್ಲಿ ಯಾವುದೇ ಬದಲಾವಣೆ ಮಾಡಲು ಆಗದು. ಈ ವಿವಾದ ಚಲನಚಿತ್ರ ವಾಣಿಜ್ಯ ಮಂಡಳಿಯ ಮುಂದೆ ಬಂದಿತ್ತು. ಆಗ ಮಂಡಳಿ ಕೆಲವೊಂದು ನಿರ್ದೇಶನ ನೀಡಿದ್ದಾರೆ. ಆದರೆ, ಅರ್ಜುನ್ ಆ ನಿರ್ದೇಶನಗಳಿಗೆ ಅನುಗುಣವಾಗಿ ನಡೆದುಕೊಂಡಿಲ್ಲ. ಅಕ್ಟೋಬರ್ 1ರಂದು ಸೆನ್ಸಾರ್ ಮಂಡಳಿಯು ಯು/ಎ ಸರ್ಟಿಫಿಕೇಟ್ ನೀಡಿದ್ದು, ಈಗ ಏನೂ ಬದಲಾವಣೆ ಮಾಡಲು ಆಗದು’ ಎಂದರು.

ಉಭಯತ್ರರ ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ, ‘ಈಗಾಗಲೇ ಮುದ್ರಿಸಿರುವ ಪೋಸ್ಟರ್ಗಳನ್ನು ಹೊರತುಪಡಿಸಿ ಮುಂದೆ ಮುದ್ರಿಸುವ ಪೋಸ್ಟರ್ ಮತ್ತು ಪ್ರಚಾರ ದಾಖಲೆಗಳಲ್ಲಿ ಎ.ಪಿ.ಅರ್ಜುನ್ ಫಿಲ್ಮ್ ಎಂಬ ಎಂಬ ಟ್ಯಾಗ್ಲೈನ್ ಸೇರ್ಪಡೆ ಮಾಡಬೇಕು. ಸಿನಿಮಾದ ಪ್ರಮೋಷನಲ್ ಚಟುವಟಿಕೆಗಳಿಗೂ ಅರ್ಜುನ್ ಅವರಿಗೆ ಅವಕಾಶ ಮಾಡಿಕೊಡಬೇಕು. ಪ್ರಮೋಷನಲ್ ಚಟುವಟಿಕೆಗಳಲ್ಲಿ ಅರ್ಜುನ್ ಚಿತ್ರ ಮತ್ತು ತಂಡದ ಸದಸ್ಯರ ವಿರುದ್ಧ ಯಾವುದೇ ಕೆಟ್ಟ ಅಭಿಪ್ರಾಯ ವ್ಯಕ್ತಪಡಿಸಬಾರದು’ ಎಂದು ಮಧ್ಯಂತರ ಆದೇಶ ಹೊರಡಿಸಿತು.

ಪ್ರತಿವಾದಿಗಳಾದ ಚಿತ್ರ ನಿರ್ಮಾಣ ಸಂಸ್ಥೆಗಳಾದ ವಾಸವಿ ಎಂಟರ್ಪ್ರೈಸಸ್, ಅದರ ಪಾಲುದಾರರಾದ ಉದಯ್ ಮತ್ತು ವಾಸವಿ ಮೆಹ್ತಾ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಇದೇ 14ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.