ರಾಮೇನಹಳ್ಳಿ ಜಗನ್ನಾಥ್ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ಬಹು ತಾರಾಗಣದ ‘ಹೊಂದಿಸಿ ಬರೆಯಿರಿ’ ಸಿನಿಮಾ ಬಿಡುಗಡೆಯ ಸಮೀಪದಲ್ಲಿದೆ. ಈಗಾಗಲೇ ಬಿಡುಗಡೆಯಾಗಿರುವ ಸಿನಿಮಾದ ಟೀಸರ್, ಹಾಡುಗಳು ಸಿನಿ ಪ್ರೇಕ್ಷಕರಲ್ಲಿ ಬಹು ನಿರೀಕ್ಷೆ ಮೂಡಿಸಿದೆ.

ಇದೀಗ ಚಿತ್ರದ ಮತ್ತೊಂದು ಬಹು ನಿರೀಕ್ಷಿತ ‘ನೀ ಇರದ ನಾಳೆ’ ಹಾಡಿನ ಲಿರಿಕಲ್ ವೀಡಿಯೋವನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ನಿರ್ದೇಶಕ ಯೋಗರಾಜ್ ಭಟ್ ಈ ಹಾಡನ್ನು ಮೆಚ್ಚಿ ಬಿಡುಗಡೆ ಮಾಡಿದ್ದಾರೆ.

‘ಹೊಂದಿಸಿ ಬರೆಯಿರಿ’ ಚಿತ್ರದಲ್ಲಿ ಒಟ್ಟು ಎಂಟು ಹಾಡುಗಳಿವೆ. ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು ಪ್ರೇಕ್ಷಕರ ಮನಗೆದ್ದಿವೆ. ಆ ಬೆನ್ನಲ್ಲೇ ‘ನೀ ಇರದ ನಾಳೆ ಬೇಕಿಲ್ಲ ನನಗೆ’ ಲಿರಿಕಲ್ ವೀಡಿಯೋ ಬಿಡುಗಡೆಯಾಗಿದೆ. ಈ ಹಾಡಿಗೆ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಸಾಹಿತ್ಯ ಬರೆದಿದೆ. ಸಂಬಂಧಗಳಲ್ಲಿರುವ ಗೊಂದಲವನ್ನು ವ್ಯಕ್ತಪಡಿಸುವ ಹಾಡು ಇದು. ಪ್ರವೀಣ್ ತೇಜ್, ಭಾವನಾ ರಾವ್ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಬರುವ ಹಾಡು ಇದು. ಕೀರ್ತನ್ ಹೊಳ್ಳ, ಐಶ್ವರ್ಯ ರಂಗರಾಜನ್ ಹಾಡಿಗೆ ದನಿಯಾಗಿದ್ದಾರೆ. ಜೋ ಕೋಸ್ಟ ಸಂಗೀತ ನಿರ್ದೇಶನ ಈ ಹಾಡಿಗಿದೆ. ಸಂಡೆ ಸಿನಿಮಾಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಹಾಡು ಬಿಡುಗಡೆಯಾಗಿದೆ.

ಪ್ರವೀಣ್ ತೇಜ್, ಭಾವನಾ ರಾವ್, ಸಂಯುಕ್ತ ಹೊರನಾಡು, ಐಶಾನಿ ಶೆಟ್ಟಿ, ನವೀನ್ ಶಂಕರ್, ಶ್ರೀಮಹದೇವ್, ಅರ್ಚನಾ ಜೋಯಿಸ್, ಅನಿರುದ್ಧ್ ಆಚಾರ್ಯ, ಸುನೀಲ್ ಪುರಾಣಿಕ್, ಪ್ರವೀಣ್ ಡಿ. ರಾವ್, ಧರ್ಮೇಂದ್ರ ಅರಸ್, ನಂಜುಂಡೇಗೌಡ, ಸುಧಾ ನರಸಿಂಹರಾಜು ತಾರಾಗಣದಲ್ಲಿದ್ದಾರೆ. ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಸಾಗುವ ಬದುಕಿನ ಪಯಣವೇ ಜೀವನ ಎನ್ನುವುದು ಚಿತ್ರದ ಒಂದು ಸಾಲಿನ ಕಥೆ. ಈ ಚಿತ್ರದಲ್ಲಿ ಐದು ಜನ ಸ್ನೇಹಿತರ ಬದುಕಿನ ಒಂದೊಂದು ಚಿತ್ರಣ ಹಾಗೂ ಭಾವನಾತ್ಮಕ ಪಯಣ ಇದೆ. ‘ಸಂಡೇ ಸಿನಿಮಾಸ್’ ಬ್ಯಾನರ್ ಅಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಸ್ನೇಹಿತರು ಸಿನಿಮಾ ನಿರ್ಮಾಣ ಮಾಡಿದ್ದಾರೆ. ಫೆಬ್ರವರಿಯಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.