ನಿರ್ದೇಶಕ ಆರ್. ಚಂದ್ರು ಮತ್ತು ನಟ ಉಪೇಂದ್ರ ಜೋಡಿ ‘ಬ್ರಹ್ಮ’ ಚಿತ್ರದಲ್ಲಿ ಒಂದಾಗಿತ್ತು. ‘ಐ ಲವ್ ಯು’ ಚಿತ್ರದ ಮೂಲಕ ಮತ್ತೆ ಈ ಜೋಡಿ ಪ್ರೇಕ್ಷಕರಿಗೆ ಮೋಡಿ ಮಾಡಲು ಸಜ್ಜಾಗಿದೆ.

ಚಂದ್ರು ಬಂಡವಾಳ ಹೂಡಿರುವ ಜೊತೆಗೆ ನಿರ್ದೇಶಿಸಿರುವ ಈ ಚಿತ್ರ ಹಲವು ಕಾರಣಗಳಿಂದ ಎಲ್ಲರ ಗಮನ ಸೆಳೆದಿದೆ. ಕೆಲವು ದಿನಗಳ ಹಿಂದೆಯಷ್ಟೇ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿತ್ತು. ಜ. 19ರಂದು ಹಾಡುಗಳ ಬಿಡುಗಡೆಗೆ ಚಿತ್ರತಂಡ ಸಿದ್ಧತೆಯಲ್ಲಿ ಮುಳುಗಿತ್ತು. ಆದರೆ, ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಶಿವೈಕ್ಯರಾದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಈಗ ಫೆ. 3ರಂದು ಆಡಿಯೊ ಬಿಡುಗಡೆಗೆ ಕಾರ್ಯಕ್ರಮ ನಿಗದಿಯಾಗಿದೆ.

ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಚಿತ್ರ ತೆರೆಕಾಣುತ್ತಿದೆ. ಉಪೇಂದ್ರ ಅವರಿಗೆ ರಚಿತಾ ರಾಮ್ ಜೋಡಿಯಾಗಿದ್ದಾರೆ. ಫೆ. 14ರ ಪ್ರೇಮಿಗಳ ದಿನದಂದು ಚಿತ್ರವನ್ನು ತೆರೆಗೆ ತರಲು ಚಿತ್ರತಂಡ ಯೋಜನೆ ರೂಪಿಸಿದೆ. ಸೋನು ಗೌಡ, ತ್ರಿವೇಣಿ ರಾವ್, ಸಾಧುಕೋಕಿಲ ತಾರಾಗಣದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.