ಆರ್.ಚಂದ್ರು ಅವರ ನಿರ್ದೇಶನದಲ್ಲಿ ಸೂಪರ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸಿರುವ`ಐ ಲವ್ ಯು’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಚಿತ್ರ ಮೇ ತಿಂಗಳಲ್ಲಿ ತೆರೆಗೆ ಬರಲಿದೆ.

ಲೋಕಸಭಾ ಚುನಾವಣೆ ಸಮಯವಾಗಿರುವುದರಿಂದ ಉಪೇಂದ್ರ ಅವರು ಪ್ರಜಾಕೀಯ ಪಕ್ಷದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಹಾಗಾಗಿ ಚಿತ್ರದ ಬಿಡುಗಡೆ ಸ್ವಲ್ಪ ವಿಳಂಬವಾಗಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಜನರ ಮನಸೆಳೆದಿವೆ.

ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್.ಚಂದ್ರು ಅವರು ನಿರ್ಮಿಸಿರುವ ಈ ಚಿತ್ರಕ್ಕೆ ಡಾ.ಕಿರಣ್ ಸಂಗೀತ ನೀಡಿದ್ದಾರೆ. ಸುಜ್ಞಾನ್ ಛಾಯಾಗ್ರಹಣ, ದೀಪು.ಎಸ್.ಕುಮಾರ್ ಸಂಕಲನ, ವಿನೋದ್, ಗಣೇಶ್ ಸಾಹಸ ನಿರ್ದೇಶನ, ಚಿನ್ನಿಪ್ರಕಾಶ್, ಶಂಕರ್, ಧನುಕುಮಾರ್ ನೃತ್ಯ ನಿರ್ದೇಶನ ಹಾಗೂ ಮೋಹನ್ ಬಿ.ಕೆರೆ ಕಲಾ ನಿರ್ದೇಶನವಿದೆ. ತಾರಾಬಳಗದಲ್ಲಿ ಉಪೇಂದ್ರ, ರಚಿತಾರಾಂ, ಸೋನು ಗೌಡ, ಬ್ರಹ್ಮಾನಂದಂ, ಜೈಜಗದೀಶ್, ಹೊನ್ನವಳ್ಳಿ ಕೃಷ್ಣ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.