ಮುಂಬೈ: ಸಮಸ್ಯಾತ್ಮಕ ದೃಶ್ಯಗಳನ್ನು ಹೊಂದಿರುವ ಚಲನಚಿತ್ರಗಳ ವಾಣಿಜ್ಯ ಯಶಸ್ಸು ಅಪಾಯಕಾರಿ ಪ್ರವೃತ್ತಿಯಾಗಿದೆ ಎಂದು ಬರಹಗಾರ ಹಾಗೂ ಚಿತ್ರಕಥೆಗಾರ ಜಾವೇದ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ.

ಔರಂಗಾಬಾದ್ನಲ್ಲಿ ನಡೆದ ಅಜಂತಾ ಎಲ್ಲೋರಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಾತನಾಡಿರುವ ಅವರು, ಪ್ರಸ್ತುತ ಚಲನಚಿತ್ರದ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. 'ಅನಿಮಲ್' ಚಿತ್ರದ ಹೆಸರನ್ನು ಉಲ್ಲೇಖಿಸದಿದ್ದರೂ, ಸಿನಿಮಾದ ಕೆಲ ದೃಶ್ಯಗಳನ್ನು ಉದಾಹರಣೆ ಸಹಿತ ವಿವರಿಸಿದ್ದಾರೆ.

ಇಂದಿನ ಕಾಲಘಟ್ಟದಲ್ಲಿ ತಯಾರಾಗುತ್ತಿರುವ ಚಿತ್ರಗಳು ಮತ್ತು ಹಾಡುಗಳ ಯಶಸ್ಸಿನ ಜವಾಬ್ದಾರಿ ಕೂಡ ಪ್ರೇಕ್ಷಕರ ಮೇಲೆ ನಿಂತಿದೆ. ಯುವ ಚಲನಚಿತ್ರ ನಿರ್ಮಾಪಕರಿಗೆ ಇದು ಪರೀಕ್ಷಾ ಸಮಯ ಎಂದು ನಾನು ನಂಬುತ್ತೇನೆ. ಉದಾಹರಣೆಗೆ, ಪುರುಷನು ಮಹಿಳೆಗೆ ತನ್ನ ಶೂ ನೆಕ್ಕಲು ಕೇಳುವ ಚಲನಚಿತ್ರವಿದ್ದರೆ ಅಥವಾ ಮಹಿಳೆಗೆ ಕಪಾಳಮೋಕ್ಷ ಮಾಡುವುದು ಸರಿ ಎಂದು ಪುರುಷ ಹೇಳಿದರೆ ಆ ಚಿತ್ರ ಸೂಪರ್ ಹಿಟ್ ಆಗಿದ್ದರೆ ಅದು ತುಂಬಾ ಅಪಾಯಕಾರಿ ಎಂದು ಅಖ್ತರ್ ಹೇಳಿದರು.

ಇಲ್ಲಿ ಅನಿಮಲ್ ಸಿನಿಮಾದ ಪ್ರಮುಖ ದೃಶ್ಯವನ್ನು ಉಲ್ಲೇಖಿಸಬಹುದು. ಚಿತ್ರದ ಪ್ರಮುಖ ಪಾತ್ರಧಾರಿ ರಣವಿಜಯ್ (ರಣಬೀರ್ ಕಪೂರ್) ತನ್ನ ಪ್ರೇಯಸಿ ಜೋಯಾಳನ್ನು (ತ್ರಿಪ್ತಿ ಧಿಮ್ರಿ ) ತನ್ನ ಪ್ರೀತಿಯನ್ನು ಸಾಬೀತುಪಡಿಸಲು ತನ್ನ ಬೂಟುಗಳನ್ನು ನೆಕ್ಕಲು ಕೇಳುತ್ತಾನೆ.

ಯಾವ ಚಿತ್ರಗಳನ್ನು ಒಪ್ಪಿಕೊಳ್ಳಬೇಕು ಮತ್ತು ತಿರಸ್ಕರಿಸಬೇಕು ಎಂಬುದನ್ನು ನಿರ್ಧರಿಸುವ ಜವಾಬ್ದಾರಿ ಇಂದು ಪ್ರೇಕ್ಷಕರ ಮೇಲಿದೆ. ಇತ್ತೀಚಿನ ದಿನಗಳಲ್ಲಿ ಸಿನಿಮಾ ನಿರ್ಮಾಪಕರಿಗಿಂತ ಹೆಚ್ಚಿನ ಜವಾಬ್ದಾರಿ ಪ್ರೇಕ್ಷಕರ ಮೇಲಿದೆ ಎಂದು ನಾನು ಭಾವಿಸುತ್ತೇನೆ. ಜೊತೆಗೆ ಚಿತ್ರಗಳಲ್ಲಿ ಯಾವ ರೀತಿಯ ಮೌಲ್ಯಗಳು ಮತ್ತು ನೈತಿಕತೆಯನ್ನು ತೋರಿಸಬೇಕು ಎಂಬ ನಿರ್ಧಾರ ನಿಮ್ಮ ಕೈಯಲ್ಲಿದೆ. ಚೆಂಡು ಪ್ರಸ್ತುತ ಪ್ರೇಕ್ಷಕರ ಅಂಗಳದಲ್ಲಿದೆ ಎಂದು ಹೇಳಿದ್ದಾರೆ.

ಅನಿಮಲ್ ಸಿನಿಮಾ:

ಡಿಸೆಂಬರ್ 1, 2023ರಂದು ತೆರೆಕಂಡ ಅನಿಮಲ್ ಸಿನಿಮಾ ಸೂಪರ್ ಹಿಟ್ ಆಗಿದೆ. ಜಾಗತಿಕವಾಗಿ ಸುಮಾರು ₹900 ಕೋಟಿ ಗಳಿಸಿದೆ. ಚಿತ್ರದಲ್ಲಿ ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್ ಹಾಗೂ ಬಾಬಿ ಡಿಯೋಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
.Movie Review: ‘ಅನಿಮಲ್’ ಸಿನಿಮಾ ವಿಮರ್ಶೆ; ಹಿಂಸಾವಿನೋದದ ಪರಾಕಾಷ್ಠೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.