ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭಾ ಚುನಾವಣೆ: ಕಂಗನಾ ನಟನೆಯ ‘ಎಮರ್ಜೆನ್ಸಿ’ ಬಿಡುಗಡೆ ದಿನಾಂಕ ಮುಂದೂಡಿಕೆ

Published : 16 ಮೇ 2024, 6:09 IST
Last Updated : 16 ಮೇ 2024, 6:09 IST
ಫಾಲೋ ಮಾಡಿ
Comments

ನವದೆಹಲಿ; ಲೋಕಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಕಂಗನಾ ರನೌತ್‌ ನಟನೆಯ ‘ಎಮರ್ಜೆನ್ಸಿ’ ಚಿತ್ರದ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ.

ಮಣಿಕರ್ಣಿಕಾ ಫಿಲ್ಮ್ಸ್ ಪ್ರೊಡಕ್ಷನ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

‘ಕಂಗನಾ ರನೌತ್ ಬಗ್ಗೆ ನಮಗೆ ಪ್ರೀತಿಯಿದೆ. ಅವರು ರಾಷ್ಟ್ರಕ್ಕಾಗಿ ಕರ್ತವ್ಯ ಮತ್ತು ಸೇವೆ ಮಾಡುವ ಬದ್ಧತೆಗೆ ಆದ್ಯತೆ ನೀಡುತ್ತಿರುವುದರಿಂದ ನಮ್ಮ ಬಹು ನಿರೀಕ್ಷಿತ ಚಿತ್ರ ‘ಎಮರ್ಜೆನ್ಸಿ’ ಬಿಡುಗಡೆಯನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ಘೋಷಿಸಲಾಗುವುದು’ ಎಂದು ಬ್ಯಾನರ್ ಹೇಳಿದೆ.

ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಂಗನಾ ಕಣಕ್ಕಿಳಿದಿದ್ದಾರೆ. ರಾಜ್ಯದಲ್ಲಿ ಜೂನ್ 1 ರಂದು ಕೊನೆಯ ಹಂತದಲ್ಲಿ ಮತದಾನ ನಡೆಯಲಿದೆ.

ಎಮರ್ಜೆನ್ಸಿ ಚಿತ್ರವನ್ನು 2023ರ ನವೆಂಬರ್‌ 24ರಂದೇ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಆಗ ಮುಂದೂಡಲಾಗಿತ್ತು. ಕಂಗನಾ ಚುನಾವಣೆ ಕೆಲಸಗಳಲ್ಲಿ ನಿರತರಾಗಿರುವ ಕಾರಣ ಈ ಬಾರಿಯೂ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆ ಮಾಡಲಾಗಿದೆ.

‘ಎಮರ್ಜೆನ್ಸಿ’ ಚಿತ್ರ ಭಾರತದ ರಾಜಕೀಯ ಇತಿಹಾಸದ ಕಥಾಹಂದರವನ್ನು ಹೊಂದಿದೆ ಎನ್ನಲಾಗಿದ್ದು, ಚಿತ್ರದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ನಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT