ನವದೆಹಲಿ: ಬಾಲಿವುಡ್ ನಟಿ, ಸಂಸದೆ ಕಂಗನಾ ರನೌತ್ ನಟನೆಯ ‘ಎಮರ್ಜೆನ್ಸಿ’ ಚಿತ್ರ ಕೊನೆಗೂ ತೆರೆ ಕಾಣುತ್ತಿದೆ. 2025ರ ಜನವರಿ 17 ರಂದು ಸಿನಿಮಾ ಬಿಡುಗಡೆಯಾಗುತ್ತಿದೆ.

ಈ ಹಿಂದೆ ಸೆ.6ರಂದು ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC)ಯಿಂದ ಪ್ರಮಾಣಪತ್ರ ಸಿಗದ ಕಾರಣ ಮುಂದೂಡಲಾಗಿತ್ತು.

ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಕಾಣಿಸಿಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಕಂಗನಾ, ‘ದೇಶದ ಅತಿ ಶಕ್ತಿಯುತ ಮಹಿಳೆಯ ಮತ್ತು ದೇಶದ ಭವಿಷ್ಯವನ್ನು ಬದಲಿಸಿದ ಮಹಾಕಾವ್ಯ ಬಿಡುಗಡೆಯಾಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

ಎಮೆರ್ಜೆನ್ಸಿ ಚಿತ್ರವನ್ನು ಕಂಗನಾ ಅವರೇ ನಿರ್ದೇಶಿಸಿ, ನಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.