ಸ್ಯಾಂಡಲ್‌ವುಡ್‌ನ ‘ಅಧ್ಯಕ್ಷ’ ಶರಣ್ ಪ್ರತಿಯೊಂದು ಸಿನಿಮಾದಲ್ಲೂ ವಿಭಿನ್ನವಾದ ಪಾತ್ರಗಳ ಮೂಲಕ ಪ್ರೇಕ್ಷಕರ ಎದುರಿಗೆ ಬರುವ ನಟ. ‘ಗುರು ಶಿಷ್ಯರು’ ಸಿನಿಮಾದಲ್ಲಿ ಮೇಷ್ಟ್ರಾಗಿ ಬಂದ ಶರಣ್, ಇದೀಗ ಎಲೆಕ್ಟ್ರಿಷಿಯನ್ ಆಗಿ ತೆರೆಯಲ್ಲಿ ಪವರ್ ತೋರಿಸಲು ಬರುತ್ತಿದ್ದಾರೆ.

ಶರಣ್ ಅವರ ಜನ್ಮದಿನದಂದೇ(ಫೆ.6) ಹೊಸ ಪ್ರಾಜೆಕ್ಟ್ ಸೆಟ್ಟೇರಿದ್ದು, ಈ ಚಿತ್ರಕ್ಕೆ ‘ಪುಗ್ಸಟ್ಟೆ ಲೈಫು ಪುರುಸೊತ್ತೇ ಇಲ್ಲ’ ಸಿನಿಮಾ ಖ್ಯಾತಿಯ ಅರವಿಂದ್ ಕುಪ್ಲಿಕರ್ ನಿರ್ದೇಶನ ಮಾಡಲಿದ್ದಾರೆ. ಡಾರ್ಕ್ ಹ್ಯೂಮರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ ಶರಣ್ ಅವರ ಪಾತ್ರ ಹಿಂದಿನ ಸಿನಿಮಾಗಳಿಗಿಂತ ವಿಭಿನ್ನವಾಗಿರಲಿದೆ. ಬಾಗಲಕೋಟೆಯಲ್ಲಿ ನಡೆಯುವ ಕಥೆಯನ್ನು ಚಿತ್ರ ಒಳಗೊಂಡಿದ್ದು, ಉತ್ತರ ಕರ್ನಾಟಕ ಶೈಲಿ ಭಾಷೆಯಲ್ಲಿ ಶರಣ್ ಗಮನ ಸೆಳೆಯಲಿದ್ದಾರೆ ಎಂದಿದ್ದಾರೆ ಅರವಿಂದ್.

ಶ್ರೀಧರ ಕೃಪ ಕಂಬೈನ್ಸ್ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿದ್ದು, ಬಿ.ಬಸವರಾಜ್ ಹಾಗೂ ಶ್ರೀಧರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಅರವಿಂದ್ ಕುಪ್ಲಿಕರ್ ನಿರ್ದೇಶನ ಮಾಡುತ್ತಿದ್ದಾರೆ. ಸಂಚಾರಿ ವಿಜಯ್ ಅಭಿನಯದ ‘ಪುಗ್ಸಟ್ಟೆ ಲೈಫು ಪುರುಸೋತ್ತೇ ಇಲ್ಲ’ ಸಿನಿಮಾ ನಂತರ ಅರವಿಂದ್ ಆ್ಯಕ್ಷನ್ ಕಟ್ ಹೇಳುತ್ತಿರುವ ಎರಡನೇ ಸಿನಿಮಾವಿದು. ಅಚ್ಯುತ್ ಕುಮಾರ್, ರಂಗಾಯಣ ರಘು ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿ ಇರಲಿದ್ದಾರೆ. ಫೆ.20ರಿಂದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದ ಶೀರ್ಷಿಕೆ ಹಾಗೂ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ಹಂಚಿಕೊಳ್ಳು ವುದಾಗಿ ಚಿತ್ರತಂಡ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.