ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಜಗದೀಶ್ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ತಾವು ಗರ್ಭಿಣಿ ಎಂಬ ವಿಚಾರವನ್ನು ಅವರು ಇತ್ತೀಚೆಗೆ ಬಹಿರಂಗಪಡಿಸಿದ್ದರು. ಈಗ ಅವರ ಸೀಮಂತ ಶಾಸ್ತ್ರ ನೆರವೇರಿದೆ.ಸದ್ಯ ಸೀಮಂತ ಶಾಸ್ತ್ರದ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಅಮೂಲ್ಯ ಸ್ಯಾಂಡಲ್‍ವುಡ್‍ಗೆ ಬಾಲನಟಿಯಾಗಿ ಪದಾರ್ಪಣೆ ಮಾಡಿದರು. ಬಳಿಕ ‘ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ನಟಿಯಾಗಿ ಮಿಂಚಿದರು. ಅಮೂಲ್ಯ 2017ರಲ್ಲಿ ಜಗದೀಶ್ ಅವರನ್ನು ಮದುವೆಯಾದರು.