ಖ್ಯಾತ ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ಅವರು ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ ಗುರುವಾರ ಬೆಳಗ್ಗೆ ಮೋದಿ ಆಸ್ಪತ್ರೆ ಬಳಿಯ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ‘ಅಧ್ಯಕ್ಷ’, ‘ರನ್ನ’, ‘ಪೊಗರು’ನಂತಹ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ ನಂದ ಕಿಶೋರ್ ಈ ಹೊಸ ಚಿತ್ರ ‘ರಾಣ’ವನ್ನು ನಿರ್ದೇಶಿಸುತ್ತಿದ್ದಾರೆ.

ಜುಲೈ 7ರಂದು ‘ರಾಣ’ ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದೆ.

ಈ ಚಿತ್ರದ ಶೀರ್ಷಿಕೆ ಮೊದಲು ನಿರ್ಮಾಪಕ ರಮೇಶ್ ಕಶ್ಯಪ್ ಅವರ ಬಳಿಯಿತ್ತು. ರಾಕಿಂಗ್ ಸ್ಟಾರ್ ಯಶ್ ಅವರು ‘ರಾಣ’ ಚಿತ್ರದಲ್ಲಿ ಅಭಿನಯಿಸಬೇಕಿತ್ತು. ರಮೇಶ್ ಕಶ್ಯಪ್ ಅವರು ನಮಗಾಗಿ ಈ ಶೀರ್ಷಿಕೆ ಬಿಟ್ಟುಕೊಟ್ಟಿದ್ದಾರೆ. ಶೀರ್ಷಿಕೆ ಬಿಟ್ಟುಕೊಟ್ಟಿರುವುದಕ್ಕೆ ನಿರ್ಮಾಪಕ ಪುರುಷೋತ್ತಮ ಗುಜ್ಜಾಲ್ ಹಾಗೂ ಕೆ.ಮಂಜು ಧನ್ಯವಾದ ತಿಳಿಸಿದ್ದಾರೆ. ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ನೀಡುತ್ತಿದ್ದು, ಶೇಖರ್ ಚಂದ್ರು ಛಾಯಾಗ್ರಹಣವಿದೆ. ನಾಯಕಿಯಾಗಿ ರೇಶ್ಮಾ ನಾಣಯ್ಯ ಅಭಿನಯಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.