ಸುಕೃತ ವಾಗ್ಲೆ ಪ್ರಮುಖಪಾತ್ರದಲ್ಲಿ ನಟಿಸಿರುವ ‘ಕಪಟಿ’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ನಟ ಡಾರ್ಲಿಂಗ್ ಕೃಷ್ಣ ಟೀಸರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಡಿ ಪಿಕ್ಚರ್ಸ್ ಲಾಂಛನದಲ್ಲಿ ದಯಾಳ್ ಪದ್ಮನಾಭನ್ ನಿರ್ಮಿಸಿರುವ ಚಿತ್ರಕ್ಕೆ ರವಿಕಿರಣ್ ಹಾಗೂ ಚೇತನ್ ಎಸ್.ಪಿ ಜಂಟಿಯಾಗಿ ಆ್ಯಕ್ಷನ್ ಕಟ್ ಹೇಳಿದ್ದಾರೆ.

‘ಇದು ನಮ್ಮ ಡಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹನ್ನೆರಡನೇ ಚಿತ್ರ. ಹತ್ತು ಕನ್ನಡ ಹಾಗೂ ಎರಡು ತಮಿಳು ಚಿತ್ರಗಳು. ಹನ್ನೊಂದು ಚಿತ್ರಗಳನ್ನು ನಾನೇ ನಿರ್ಮಿಸಿ, ನಿರ್ದೇಶನವನ್ನೂ ಮಾಡಿದ್ದೇನೆ. ಆದರೆ ಈ ಚಿತ್ರವನ್ನು ನಾನು ನಿರ್ಮಾಣ ಮಾತ್ರ ಮಾಡಿದ್ದೇನೆ. ‘ಡಾರ್ಕ್ ನೆಟ್’ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಕನ್ನಡದಲ್ಲಿ ‘ಗುಲ್ಟು’ ಚಿತ್ರದ ನಂತರ ಈ ಜಾನರ್‌ನ ಚಿತ್ರ ಬಂದಿರಲಿಲ್ಲ. ಆಗಸ್ಟ್ 23 ಚಿತ್ರ ತೆರೆಗೆ ಬರಲಿದೆ’ ಎಂದರು ದಯಾಳ್ ಪದ್ಮನಾಭನ್.

ದೇವ್ ದೇವಯ್ಯ ಹಾಗೂ ಸಾತ್ವಿಕ್ ಕೃಷ್ಣನ್ ಮುಂತಾದವರು ತಾರಾಗಣದಲ್ಲಿದ್ದಾರೆ. ಜೋಹನ್ ಸಂಗೀತ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.