ಭಾನುವಾರ, 30 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಮರ್ಯಾದೆ ಪ್ರಶ್ನೆ’ಯಲ್ಲಿ ಕಲಾವಿದರ ದಂಡು

Published 28 ಜೂನ್ 2024, 0:29 IST
Last Updated 28 ಜೂನ್ 2024, 0:29 IST
ಅಕ್ಷರ ಗಾತ್ರ

ಆರ್‌.ಜೆ. ಪ್ರದೀಪ್‌ ನಿರ್ಮಾಣದ, ನಾಗರಾಜ್‌ ಸೋಮಯಾಜಿ ಆ್ಯಕ್ಷನ್‌ ಕಟ್‌ ಹೇಳಿರುವ ‘ಮರ್ಯಾದೆ ಪ್ರಶ್ನೆ’ ಸಿನಿಮಾ ತನ್ನ ಶೀರ್ಷಿಕೆಯಿಂದಲೇ ಗಮನಸೆಳೆದಿದೆ. ಇದೀಗ ಚಿತ್ರತಂಡ ತನ್ನ ತಾರಾಬಳಗವನ್ನು ಪರಿಚಯಿಸಿದೆ.  

ಪ್ರತಿಭಾನ್ವಿತರ ದಂಡೇ ಚಿತ್ರದಲ್ಲಿದ್ದು, ಭಿನ್ನ ಪಾತ್ರಗಳಿಗೆ ಹಲವರು ಬಣ್ಣ ಹಚ್ಚಿದ್ದಾರೆ. ರಾಕೇಶ್‌ ಅಡಿಗ, ಸುನೀಲ್‌ ರಾವ್‌, ಶೈನ್‌ ಶೆಟ್ಟಿ, ತೇಜು ಬೆಳವಾಡಿ, ಪೂರ್ಣಚಂದ್ರ ಮೈಸೂರು, ಪ್ರಭು ಮುಂಡ್ಕೂರ್‌, ರೇಖಾ ಕೂಡ್ಲಿಗಿ, ನಾಗೇಂದ್ರ ಶಾ, ಶ್ರವಣ್‌ ಚಿತ್ರದ ಮುಖ್ಯ ತಾರಾಗಣದಲ್ಲಿದ್ದಾರೆ. ಸಕ್ಕತ್‌ ಸ್ಟುಡಿಯೋ ಬ್ಯಾನರ್‌ನಡಿ ಪ್ರದೀಪ್‌ ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ಈ ಚಿತ್ರಕ್ಕೆ ಪ್ರದೀಪ್‌ ಅವರೇ ಕಥೆ ಬರೆದಿದ್ದಾರೆ.

ನಾಗರಾಜ ಸೋಮಯಾಜಿ ಈ ಮೊದಲು ಸಂಚಾರಿ ವಿಜಯ್ ನಟನೆಯ ‘ಪುಗ್ಸಟ್ಟೆ ಲೈಫು’ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಇದರ ಜೊತೆಗೆ ಅವರು ‘ಬೆಸ್ಟ್ ಆ್ಯಕ್ಟರ್’ ಹೆಸರಿನ ಮೈಕ್ರೋ ಮೂವಿ ಮಾಡಿದ ಅನುಭವ ಹೊಂದಿದ್ದಾರೆ. ‘ಮರ್ಯಾದೆ ಪ್ರಶ್ನೆ’ ಚಿತ್ರಕ್ಕೆ ಸಂದೀಪ್ ವೆಲ್ಲುರಿ ಛಾಯಾಚಿತ್ರಗ್ರಹಣ, ಅರ್ಜುನ್ ರಾಮು ಸಂಗೀತ ನಿರ್ದೇಶನವಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT